ಪ್ರೌಢಶಾಲೆಗಳ ಕ್ರೀಡಾಕೂಟ: ಕಾರವಾರ ಬಾಲಮಂದಿರ ಚಾಂಪಿಯನ್
High School Sports Meet: Karwar Balamandir champions
ಪ್ರೌಢಶಾಲೆಗಳ ಕ್ರೀಡಾಕೂಟ: ಕಾರವಾರ ಬಾಲಮಂದಿರ ಚಾಂಪಿಯನ್
ಕಾರವಾರ 10: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಕಾರವಾರ, ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರವಾರ ವಲಯ ಮತ್ತು ತಾಲೂಕು ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ: 2025-26 ನಡೆದಿದ್ದು, ಕಾರವಾರ ಬಾಲಮಂದಿರ ಪ್ರೌಢಶಾಲೆಯು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪ್ರೌಢಶಾಲಾ ವಿಭಾಗದಲ್ಲಿ: ಕು. ಕಾರ್ತಿಕ್ ಆರ್. ನಾಯ್ಕ ಇತನು 800ಮೀ, 1500ಮೀ ಹಾಗೂ 3000ಮೀ. ಓಟದಲ್ಲಿ ವಲಯ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿರುತ್ತಾರೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ: ಕು. ಪೂರ್ವಿ ಟಿ. ಹರಿಕಂತ್ರ ಇವಳು 200ಮೀ, 400ಮೀ ಹಾಗೂ 600ಮೀ. ಓಟದಲ್ಲಿ ವಲಯ ಹಾಗೂ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿರುತ್ತಾರೆ. ಹಾಗೂ ವಿಜಾಪುರದಲ್ಲಿ ನಡೆಯಲಿರುವ ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಎಸ್. ಪಿ. ಕಾಮತ್, ಉಪಾಧ್ಯಕ್ಷರಾದ ಅನಿರುದ್ಧ ಹಳದಿಪುರ ಹಾಗೂ ಆಡಳಿತಾಧಿಕಾರಿ ಜಿ. ಪಿ. ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿರುತ್ತಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಕರ ಎಸ್. ಮಡಿವಾಳ ಮತ್ತು ಪ್ರಶಾಂತ ಆರ್. ನಾಯ್ಕ ಮಾರ್ಗದರ್ಶನ ನೀಡಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 