ಚಿಕ್ಕೋಡಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ- ಗಣೇಶ ಹುಕ್ಕೇರಿ
High priority for comprehensive development of Chikkodi town - Ganesh Hukkeri
ಚಿಕ್ಕೋಡಿ 19 : ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ಪಟ್ಟಣದಲ್ಲಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಈಗಾಗಲೇ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಅವರ ಪ್ರಯತ್ನದಿಂದ ಸುಮಾರು ?19 ಕೋಟಿ ಅನುದಾನದಲ್ಲಿ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.ಪಟ್ಟಣದ ಭೀಮನಗರದಲ್ಲಿ ?50 ಲಕ್ಷಗಳ ಅನುದಾನದಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪಟ್ಟಣದ ನಾಗಲಿಂಗೇಶ್ವರ ಕಾಲೋನಿ ಹಾಗೂ ಅಂಬೇಡ್ಕರ್ ನಗರ ನಿವಾಸಿಗಳು ನೀಡಿದ ಮನವಿಗೆ ಸ್ಪಂದಿಸಿ, ನಾಗಲಿಂಗೇಶ್ವರ ಕಾಲೋನಿಯಲ್ಲಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿಗಾಗಿ ಬೋರ್ವೆಲ್ ಕಾಮಗಾರಿಗಳಿಗೆ ?53.50 ಲಕ್ಷ ಹಾಗೂ ಅಂಬೇಡ್ಕರ್ ನಗರದಲ್ಲೂ ಇದೇ ರೀತಿಯ ಕಾಮಗಾರಿಗಳಿಗೆ ?53.50 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದರು.ಇನ್ನೂ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಾಗಲೇ ಹಲವು ವಾರ್ಡ್ಗಳಲ್ಲಿ ಬೋರ್ವೆಲ್ ಕೊರೆದು ಪಂಪ್ಸೆಟ್ ಅಳವಡಿಸಿ ಸಾರ್ವಜನಿಕರಿಗೆ ನೀರಿನ ಸೌಲಭ್ಯ ಒದಗಿಸಲಾಗಿದೆ. ಉಳಿದ ವಾರ್ಡ್ಗಳಲ್ಲೂ ಕೂಡ ಇದೇ ರೀತಿಯ ಕ್ರಮಗಳನ್ನು ಕೈಗೊಂಡು ನೀರಿನ ಕೊರತೆ ನಿವಾರಣೆ ಮಾಡುವುದಾಗಿ ಭರವಸೆ ನೀಡಿದರು.
ಅದೇ ರೀತಿ ಬಸವೇಶ್ವರ ವೃತ್ತದಲ್ಲಿ ಅಗಲೀಕರಣ ಹಾಗೂ ಚರಂಡಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಅಂಕಲಿ ಖೂಟದಿಂದ ದುರ್ಗಾ ಭವನದವರೆಗೆ ಹೆಚ್ಚಿನ ಟ್ರಾಫಿಕ್ ಸಮಸ್ಯೆ ಇರುವುದರಿಂದ ರಸ್ತೆ ಅಗಲೀಕರಣಕ್ಕಾಗಿ ?1.09 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಭೂಸ್ವಾಧೀನಕ್ಕೆ ಒಳಪಡುವ ಫಲಾನುಭವಿಗಳಿಗೆ ಶೀಘ್ರ ಪರಿಹಾರಧನ ನೀಡಿ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರಾದ ಶ್ಯಾಮ ರೇವಡೆ, ಶ್ರೀಮಂತ ಮಾಳಗೆ, ಗುಲಾಬ ಬಾಗವಾನ, ಇರ್ಫಾನ ಬೇಪಾರಿ, ಅನೀಲ ಮಾನೆ, ಮಾಜಿ ಅಧ್ಯಕ್ಷರಾದ ಪ್ರಭಾಕರ ಕೋರೆ, ಮುಖಂಡರಾದ ಅಶೋಕ ಭಂಡಾರಕರ, ಸತೀಶ ಕುಲಕರ್ಣಿ, ಸಂಜು ಮದಾಳೆ, ವಿಕಾಶ ಭಂಡಾರಕರ, ಕಂಟಿ ಶೇಟನ್ನವರ, ದುಂಡಪ್ಪ ರೇವಡೆ, ಕುಮಾರ ಗಡಕರಿ, ಸುರೇಶ ಬ್ಯಾಕುಡೆ ಸೇರಿದಂತೆ ಪುರಸಭೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 