ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಸಚಿವ ಎಸ್.ಮಧು ಬಂಗಾರಪ್ಪ
High school sanctioned for Amarapura cross or Navilagudda village: Minister S. Madhu Bangarappa
ಬೆಳಗಾವಿ ಸುವರ್ಣ ವಿಧಾನಸೌಧ ಡಿ. 11 : ದೇವದುರ್ಗ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು.
ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದ್ದರಿಂತ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರ್ಕಾರ ಮಂಜೂರಾತಿ ನೀಡಲಿದೆ. ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು.
ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ಶಾಲಾ ಕಟ್ಟಡಗಳು ಹಾಗೂ ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇಲ್ಲಿ ಶಿಕ್ಷಕರನ್ನು ನಿಯೋಜಿಸಿ ತಾತ್ಕಾಲಿಕವಾಗಿ ಬ್ರ್ಯಾಂಚ್ ಶಾಲೆ ತೆರೆಯಲಾಗಿದೆ. ಮಲ್ಲೇಗೌಡರ ದೊಡ್ಡಿಯಲ್ಲಿ ನಿಯಮಾನುಸಾರ ಪ್ರಾಥಮಿಕ ಶಾಲೆ ಮಂಜೂರು ಮಾಡಲು ಪರೀಶೀಲನೆ ನಡೆಸುವುದಾಗಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 