ಗಣತಿ ಕಾರ್ಯದಿಂದ ಪ್ರೌಢ ಶಾಲಾ ಶಿಕ್ಷಕರನ್ನು ಕೈ ಬಿಡಿ: ತರಬೇತಿಗೆ ಬಹಿಷ್ಕರಿಸಿ, ತಹಶಿಲ್ದಾರ ಕಚೇರಿ ಎದುರು ಶಿಕ್ಷಕರ ಧರಣಿ ಸತ್ಯಾಗ್ರಹ
High school teachers should be exempted from census work: Teachers boycott training, stage sit-in in
ಚಡಚಣ 20: ಇದೆ 22ರಂದು ಆರಂಭಗೊಳ್ಳಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಿಂದ ಪ್ರೌಢ ಶಾಲಾ ಶಿಕ್ಷಕರನ್ನು ಕೈ ಬಿಡುವಂತೆ ಆಗ್ರಹಿಸಿ ಶನಿವಾರ ಪ್ರೌಢ ಶಾಲೆಯ ನೂರಾರು ಶಿಕ್ಷಕರು ತರಬೇತಿ ಬಹಿಷ್ಕರಿಸಿ ಸ್ಥಳೀಯ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಆರ್.ಎಂ. ಚೋಪಡೆ ಮಾತನಾಡಿ, ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಪ್ರೌಢ ಶಾಲಾ ಶಿಕ್ಷಕರನ್ನು ಬಳಸಿಕೊಂಡಿಲ್ಲ, ಎಸ್.ಎಸ್.ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಭಾರ, ಶಿಕ್ಷಣ ಇಲಾಖೆ ನೀಡಿದ 29 ಅಂಶಗಳ ಅನುಷ್ಠಾನ ಸೇರಿದಂತೆ ಹಲವು ಕಾರ್ಯಗಳು ಪ್ರೌಢ ಶಾಲಾ ಶಿಕ್ಷಕರ ಮೇಲಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಪ್ರೌಢ ಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎ.ಎಸ್. ಕರ್ಜಗಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಸ್. ದಂದರಗಿ ಮಾತನಾಡಿ, ಗಣತಿ ಕಾರ್ಯಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೊದಲು ಆದ್ಯತೆ ನೀಡಲು ಆದೇಶವಿದೆ, ಚಡಚಣ ವಲಯದಲ್ಲಿ ಅಗತ್ಯ ಪ್ರಾಥಮಿಕ ಶಾಲಾ ಶಿಕ್ಷಕರಿದ್ದರೂ ಪ್ರೌಢ ಶಾಲಾ ಶಿಕ್ಷಕರರನ್ನು ನಿಯೋಜನೆ ಮಾಡುವದನ್ನು ವಿರೋಧಿಸುತ್ತೇವೆ, ಕೂಡಲೇ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಳು ಪೌಢ ಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಿಂದ ಮುಕ್ತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ನಂತರ ತಹಶಿಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಪ್ರತಿಭಟನೆಯಲ್ಲಿ ಪ್ರೌಢ ಶಾಲಾ ಸೋಸಾಯಿಟಿ ಅಧ್ಯಕ್ಷ ಆರ್.ಎಂ. ಭಂಡಿ, ಉಪಾಧ್ಯಕ್ಷ ಎಸ್.ಐ ಚನಗೊಂಡ, ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಸುನಿಲ ಶಹಾ ಸೇರಿದಂತೆ ನೂರಾರು ಶಿಕ್ಷಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 