ಅರ್ಥಪೂರ್ಣವಾಗಿ ಹೈ-ಕ ವಿಮೋಚನಾ ದಿನಾಚರಣೆ ಆಚರಿಸಲು ನಿರ್ಧಾರ : ಸುನೀಲ್ಕುಮಾರ್

ಕೊಪ್ಪಳ 07: ಹೈದರಾಬಾದ್ ಕರ್ನಾಟಕ  ವಿಮೋಚನಾ ದಿನಾಚರಣೆಯನ್ನು ಇದೇ ಸೆಪ್ಟೆಂಬರ್. 17 ರಂದು ಸಂಭ್ರಮ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.  

ಹೈದರಾಬಾದ್ ಕನರ್ಾಟಕ ವಿಮೋಚನಾ ದಿನಾಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

ಸೆ. 17 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.  ಮತ್ತು ಬೆಳಿಗ್ಗೆ 09 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ.  ಶಾಲಾ ಮಕ್ಕಳ, ಎನ್.ಸಿ.ಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ನಡೆಯಲಿದೆ.  ಅಂದು ಸಂಜೆ 6ಕ್ಕೆ ನಗರದ ಸಾಹಿತ್ಯ ಭವನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ದಿನಾಚರಣೆಯ ಯಶಸ್ವಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ನೇಮಕ ಮಾಡಿದ್ದು ಸಮಿತಿ ಅಧ್ಯಕ್ಷರು ತಮ್ಮ ಸಮಿತಿಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಹೈದರಾಬಾದ್ ಕನರ್ಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು.  ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಶಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ  ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾಹಿತಿ ಎಚ್.ಎಸ್. ಪಾಟೀಲ್, ಅಲ್ಲಮಪ್ರಭು ಬೆಟ್ಟದೂರ, ಬಸವರಾಜ ಆಕಳವಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.