ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ  Hindu Maha Ganapati Immersion Procession


ಮುಂಡಗೋಡ: ಪಟ್ಟಣದ ಆಂಜನೇಯ ದೇವಸ್ಥಾನದ ಬಳಿ ಪ್ರತಿಷ್ಠಾಪಿಸಲಾಗಿದ್ದ 13 ದಿನಗಳ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ನೆರವೇರಿತು.  

ಮೆರವಣಿಗೆಯಲ್ಲಿ ‘ಮಾವುಲಿ ಡೋಲ್‌-ತಾಶಾ ಧ್ವಜ ಪಥಕ್‌’ ಸೇರಿದಂತೆ ವಿವಿಧ ಕಲಾತಂಡಗಳು ಹಾಗೂ ಬೇಡರ ವೇಷಧಾರಿಗಳ ಜಾನಪದ ಕಲಾ ಪ್ರದರ್ಶನ ಗಮನ ಸೆಳೆಯಿತು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಮಕ್ಕಳು, ಮಹಿಳೆಯರು ಹಾಗೂ ಯುವಕರು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.  

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯು ಬಸವ ಹೊಂಡ ತಲುಪಿದ ಬಳಿಕ ಧಾರ್ಮಿಕ ಪೂಜಾ ವಿಧಿ-ವಿಧಾನಗಳೊಂದಿಗೆ ವಿಘ್ನನಿವಾರಕ ಗಣೇಶ ಮೂರ್ತಿಯನ್ನು ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.  

ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಪಿಐ ರಮೇಶ್ ಹಾನಪೂರ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರಿ​‍್ಡಸಲಾಗಿತ್ತು.