ಹೊಳಗುಂದಿ : ರಸ್ತೆ ಅಪಘಾತ ಇಬ್ಬರು ಬೈಕ್ ಸಾವರರು ಸಾವು
Holagundi: Two bikers die in road accident
ಹೊಳಗುಂದಿ : ರಸ್ತೆ ಅಪಘಾತ ಇಬ್ಬರು ಬೈಕ್ ಸಾವರರು ಸಾವು
ಲೋಕದರ್ಶನ ವರದಿ
ಹೂವಿನಹಡಗಲಿ 11 : ತಾಲೂಕಿನ ಹೊಳಗುಂದಿ ಹೊರ ವಲಯದ ಕೆಇಬಿ ಗ್ರೀಡ್ ಬಳಿ ಶುಕ್ರವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮದ ಸುಗ್ಗೆನಹಳ್ಳಿ ಹನುಮರೆಡ್ಡಿ (63), ಸುಗ್ಗೆನಹಳ್ಳಿ ಬಸವರೆಡ್ಡಿ (58) ಮೃತ. ಸವಾರರು ಎಂದು ಗುರುತಿಸಲಾಗಿದೆ. ಇಬ್ಬರಿಗೂ ತಲೆಗೆ ಪೆಟ್ಟುಬಿದ್ದು ತೀವ್ರ ರಕ್ತಸಿಕ್ತರಾಗಿ ಸಾವನ್ನಪ್ಪಿದ್ದಾರೆ. ಮೃತರು ಕೆ.ಎ.35, 4820 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಹೂವಿನಹಡಗಲಿಯಿಂದ ಗದ್ದಿಕೇರಿ ಕಡೆಗೆ ಹೋಗುತ್ತಿದ್ದರು. , ಎಎಸ್‌ಐ ರಾಜೇಂದ್ರನಾಯ್ಕ, ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.ನಂತರ ರಸ್ತೆ ಅಪಘಾತ ಸ್ಥಳಕ್ಕೆ ಶಾಸಕ ಕೃಷ್ಣನಾಯ್ಕ ಭೇಟಿ ನೀಡಿ ಮೃತರಿಗೆ ಸಂತಾಪ ಸಲ್ಲಿಸಿ ಅಪಘಾತ ಬಗ್ಗೆ ಪೋಲಿಸರ ಜತೆ ಚರ್ಚೆಸಿ ಮಾಹಿತಿ ಪಡೆದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 