ಮನೆ ಮನೆ ಕಸ ಸಂಗ್ರಹಣೆಗೆ ರಾಮಚಂದ್ರನ್ ಸೂಚನೆ

ಬಾಗಲಕೋಟೆ: ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬರುವ ಪ್ರತಿಯೊಂದು ವಾರ್ಡಗಳ ಮನೆ ಮನೆಗಳ ಕಸ ಸಂಗ್ರಹಿಸಿ ವಿಲೇ ಮಾಡುವಂತೆ ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಘನ ತ್ಯಾಜ್ಯ ವಸ್ತು ವಿಲೇವಾರಿ ಕುರಿತಂತೆ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ಟಾಸ್ಕಪೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಷ್ಟ್ರೀಯ ಹರಿಸು ನ್ಯಾಯಾಧೀಕರಣ ಪೀಠದ ಆದೇಶದಂತೆ ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳು ಶೇ.100 ರಷ್ಟು ಕಸ ಸಂಗ್ರಹಣೆ ಕಾರ್ಯವಾಗಬೇಕು. 

ಈಗಾಗಲೇ ಎಲ್ಲ ಸ್ಥಳೀಯ ಸಂಸ್ಥೆಗಳ 326 ವಾರ್ಡಗಳ ಪೈಕಿ 80 ವಾರ್ಡಗಳಲ್ಲಿ ಶೇ.100 ರಷ್ಟು ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ ಸಂಗ್ರಹಿಸಲಾಗುತ್ತಿದೆ. ಎಂದು ಸಭೆಗೆ ತಿಳಿಸಿದಾಗ ಜುಲೈ 25 ರೊಳಗಾಗಿ 20 ವಾರ್ಡಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ರಾಷ್ಟ್ರೀಯ ಹಸಿರು ನ್ಯಾಧೀಕರಣ ನೀಡಿದ ನಿದರ್ೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮನೆ ಮನೆ ಕಸ ಸಂಗ್ರಹ ಹಾಗೂ ಮೂಲದಲ್ಲಿಯೇ ಕಸ ತ್ಯಾಜ್ಯ ವಿಂಗಡಣೆ ಕುರಿತು ವಿದ್ಯಾಥರ್ಿಗಳಿಗೆ ಅರಿವು ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರಿಗೆ ಸೂಚನೆ ನೀಡಿದರು,.

ಜಿಲ್ಲೆಯ ಎಲ್ಲ ಸಾರ್ವಜನಿಕರು ನಗರ ಸ್ಥಳೀಯ ಸಂಸ್ಥೆಗಳ ಆಡಳಿತದೊಂದಿಗೆ ಸಹಕರಿಸಿ ಮನೆ ಮನೆ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಸಹಕರಿಸಿ ನಗರದ ಸ್ವಚ್ಛತೆಗೆ ಸಾರ್ವಜನಿಕರು ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಸಭೆಯ ಮೂಲಕ ಕೋರಿದರು. ನಗರಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತು ಕಟ್ಟುನಿಟ್ಟಾಗಿ ಕ್ರಮ ಜರುಗಿಸಲು ಸಹ  ಜಿಲ್ಲಾಧಿಕಾರಿಗಳು ನಿದರ್ೇಶನ ನೀಡಿದರು.

 ಸಭೆಯಲ್ಲಿ ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪಂವಾರ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ವಿಜಯ ಮೆಕ್ಕಳಕಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಕೆ.ದೇಸಾಯಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಸೇರಿದಂತೆ ಜೈ ಭಾರತ ಮಾತಾ ಸ್ವಯಂ ಸೇವಾ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.