ಹಾವೇರಿ:ಎ. 11: ಬೇಸಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಪ್ರತಿ ತಾಲೂಕಿಗೆ 50 ಲಕ್ಷ ರೂ.ಗಳನ್ನು ರಾಜ್ಯ ಸಕರ್ಾರ ನೀಡಲಿದೆ. ಜಿಲ್ಲೆಯ ಪ್ರತಿ ತಾಲೂಕುವಾರು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಪಂಚಾಯತ್ ರಾಜ್ ಇಂಜನೀಯರ್ ವಿಭಾಗಕ್ಕೆ ಗೃಹ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಸಂದರ್ಭದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗುರುತಿಸಿ ನೀರು ಪೂರೈಕೆಗಾಗಿ ಕ್ರಿಯಾ ಯೋಜನೆಯನ್ನು ಸಿದ್ಧಮಾಡಿಕೊಳ್ಳಿ. ಈ ಹಣವನ್ನು ಪ್ರಸಕ್ತ ಕುಡಿಯುವ ನೀರಿನ ಬೇಡಿಕೆಗಳನ್ನು ಪೂರೈಸಲು ಮಾತ್ರ ಬಳಸಬೇಕು ಎಂದು ಸೂಚಿಸಿದರು.
ಸಕರ್ಾರ ಬರಪೀಡಿತ ತಾಲೂಕುಗಳಿಗೆ ತಲಾ ಒಂದು ಕೋಟಿ ರೂ. ಹಾಗೂ ಇತರ ತಾಲೂಕುಗಳಿಗೆ ಕುಡಿಯುವ ನೀರಿಗಾಗಿ 50 ಲಕ್ಷ ರೂ. ನೀಡಲು ತೀಮರ್ಾನಿಸಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.
ಮುಂಗಾರು ಬಿತ್ತನೆಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ಗೊಬ್ಬರಗಳನ್ನು ದಾಸ್ತಾನುಮಾಡಿಕೊಳ್ಳಬೇಕು. ರೈತರ ಬೇಡಿಕೆಗೆ ಅನುಸಾರ ಗೊಬ್ಬರ ಮತ್ತು ಬೀಜಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಕೃಷಿ ಜಂಟಿ ನಿದರ್ೆಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ ಅವರು ಮಂಗಳ ಕಂಪನಿಯ ಡಿಎಪಿ ಗೊಬ್ಬರದ ಬೇಡಿಕೆ ಇರುವುದರಿಂದ ಈ ಗೊಬ್ಬರ ಖರೀದಿಸಲು ಪೂರೈಸಲು ಸಭೆಯಲ್ಲಿ ಮನವಿ ಮಾಡಿಕೊಂಡರು.
ಮಂಗಳ ಕಂಪನಿಯ ಡಿಎಪಿ ಗೊಬ್ಬರ ಪೂರೈಕೆ ಕುರಿತಂತೆ ಕಂಪನಿಗೆ ಪ್ರಸ್ತಾವನೆ ಸಲ್ಲಿಸಿ ಕ್ರಮವಹಿಸಲಾಗುವುದು ಹಾಗೂ ಸೋಯಾಬೀನ್ ಬಿತ್ತನೆ ಬೀಜ ಬೇಡಿಕೆ ವಿವರ ಸಲ್ಲಿಸಲು ಸೂಚಿಸಿದರು. ಈ ಕುರಿತಂತೆ ಮದ್ಯಪ್ರದೇಶದಿಂದ ತರಿಸಿಕೊಳ್ಳಲು ಅಗತ್ಯ ಕ್ರಮವಹಿಸುವುದಾಗಿ ತಿಳಿಸಿದರು.
ಅಭಿನಂದನೆ: ಇದೇ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಸ್ತುವಾರಿ ಸಚಿವರು ಎಲ್ಲರನ್ನೂ ಅಭಿನಂದಿಸಿದರು. ಮತ್ತಷ್ಟು ಗಂಭೀರವಾಗಿ ಪರಿಗಣಿಸಿ ಕೋವಿಡ್-19 ಸೋಂಕು ಜಿಲ್ಲೆಯಲ್ಲಿ ಹರಡದಂತೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸಲಹೆ ನೀಡಿದರು.