ಪ್ರಾಮಾಣಿಕ ಪತ್ರಿಕೋದ್ಯಮದಿಂದಲೇ ವೃತ್ತಿಗೆ ಗೌರವ : ಜಡಿಮಠದಶ್ರೀ
Honest Journalism Brings Respect to the Profession: Jadimatha Sri
ಲೋಕದರ್ಶನ ವರದಿ
ದೇವರಹಿಪ್ಪರಗಿ 31: ಪತ್ರಕರ್ತರು ಯಾವುದೇ ಭಯ, ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ, ನಿರ್ಭೀತ ಹಾಗೂ ಸತ್ಯನಿಷ್ಠೆಯಿಂದ ವಾಸ್ತವಾಂಶಗಳನ್ನು ಜನರಿಗೆ ತಲುಪಿಸಬೇಕು ಹಾಗೂ ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿ, ಜನಪರ ಧೋರಣೆಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಗೌರವ ದೊರೆಯುತ್ತದೆ ಎಂದು ಜಡಿ ಮಠದ ಜಡಿ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗವು ಸಮಾಜದ ಕಣ್ಣು ಮತ್ತು ಧ್ವನಿಯಾಗಿದ್ದು, ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಅವರು ಮಾತನಾಡಿ, ಮಾಧ್ಯಮ ಸಮಾಜದ ನ್ಯೂನತೆಗಳನ್ನು ತಿದ್ದುವ ಪ್ರಬಲ ಅಸ್ತ್ರವಾಗಿದೆ.ಜನರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ನಮ್ಮ ದೇಶದಲ್ಲಿ ಸ್ವತಂತ್ರ ಪೂರ್ವ ಸ್ವಾತಂತ್ರ್ಯದ ನಂತರ ಪತ್ರಿಕಾರಂಗ ನಡೆದು ಬಂದ ಹಾದಿ ತಿಳಿಸಿದರು.
ಪತ್ರಿಕಾರಂಗದ ದಿಗ್ಗಜ ಮೊಹರೆ ಹನುಮಂತರಾಯರ ನಾಡಿನಲ್ಲಿ ಎಲ್ಲಾ ಪತ್ರಕರ್ತರು ಒಳ್ಳೆಯ ಕೆಲಸ ಮಾಡುವ ಜೊತೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.ತಾಲ್ಲೂಕಿನಲ್ಲಿ ಪತ್ರಕರ್ತರಿಗಾಗಿ ಪತ್ರಿಕ ಭವನ ನಿರ್ಮಾಣ ಮಾಡಲು ಅಧಿಕಾರಿಗಳು ಸಿ.ಎ. ನಿವೇಶನ ನೀಡಲು ಮನವಿ ಮಾಡಿದರು.
ದಂಡಾಧಿಕಾರಿ ಹಾಗೂ ತಹಶೀಲ್ದಾರ್ ನಿಂಗಣ್ಣ ಬಿರಾದಾರ, ಪಿಎಸ್‌ಐ ಸಚಿನ್ ಆಲಮೇಲಕರ, ಪ.ಪಂ. ಮುಖ್ಯಾಧಿಕಾರಿ ಅಪ್ರೋಜ ಅಹ್ಮದ ಪಟೇಲ ಜಿಲ್ಲಾ ಉಪಾಧ್ಯಕ್ಷ ಶಶಿಕಾಂತ ಮೆಂಡೆಗಾರ ಹಾಗೂ ತಾ.ಪಂಇಒ ಭಾರತಿ ಚೆಲುವಯ್ಯ ಅವರು ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಅಭಿವೃದ್ಧಿಗೆ ಪೂರಕವಾದ ಶಕ್ತಿಯಾಗಿದೆ. ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯುತ ವರದಿಗಾರಿಕೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುತ್ತದೆ.
ಅಭಿವೃದ್ಧಿ ಪರ ಮತ್ತು ಜನಪರವಾದ ವರದಿಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಪತ್ರಿಕಾ ದಿನಾಚರಣೆ ಕೇವಲ ಆಚರಣೆಯಲ್ಲ, ಸಮಾಜಕ್ಕಾಗಿ ದುಡಿಯುವ ಪತ್ರಕರ್ತರ ಸೇವೆಯನ್ನು ಗೌರವಿಸುವ ದಿನವಾಗಿದೆ. ಸಮಾಜದ ಹಿತದೃಷ್ಟಿಯಿಂದ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು. ಪ್ರಾಸ್ತಾವಿಕವಾಗಿ ತಾಲೂಕು ಘಟಕದ ಕಾನಿಪ ಅಧ್ಯಕ್ಷ ಸಂಗಮೇಶ ಉತ್ನಾಳ ಮಾತನಾಡಿದರು.
ಕಾನಿಪ ಸಂಘದ ತಾಲೂಕ ಖಜಾಂಚಿ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಉಪಾಧ್ಯಕ್ಷ ಮಂಜುನಾಥ ಬ್ಯಾಕೋಡ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಮಳೆಪಗೌಡ ಬಿರಾದಾರ, ಹಿರಿಯ ಪತ್ರಕರ್ತರಾದ ಈರನಗೌಡ ಪಾಟೀಲ, ಭೀಮಣ್ಣ ದಿಡ್ಡಿಮನಿ, ಪ್ರವೀಣ ಕುಲಕರ್ಣಿ, ಹಸನ್ ನದಾಫ, ಅಶೋಕ ಗೊಲ್ಲರ, ಶಂಕರಲಿಂಗ ಬಿರಾದಾರ, ನಬಿರಸೂಲ ಗುಡ್ನಾಳ, ಸೋಮನಾಥ ನಡಗೇರಿ, ಮಲ್ಲಿಕಾರ್ಜುನ ಕಬ್ಬಿನ, ಅಣ್ಣಸಾಹೇಬ ಹೂಗಾರ, ಅಹಮದ್ ಅಲಿ ಮುಲ್ಲಾ,
ಯಲ್ಲಾಲಿಂಗ ಉಮರಾಣಿ, ಡಾ.ಸತೀಶ ನಾಡಗೌಡ, ಕಸಾಪ ನಿಕಟಪೂರ್ವ ಅಧ್ಯಕ್ಷ ಜಿ.ಪಿ.ಬಿರಾದಾರ, ಸ್ಥಳೀಯ ಶಾಲೆಯ ಮುಖ್ಯ ಗುರುಗಳಾದ ಪಿ.ಸಿ.ತಳಕೇರಿ, ಎಸ್‌ಡಿಎಮ್‌ಸಿ ಅಧ್ಯಕ್ಷ ಸಂಪತ್ ಜಮಾದಾರ, ಕರವೇ ರಹೀಮಾನ ಕನಕಲ್ ಸೇರಿದಂತೆ ತಾಲೂಕಿನ ಪತ್ರಕರ್ತರು ಹಾಗೂ ಗಣ್ಯರು ಪಾಲ್ಗೊಂಡಿದ್ದರು. ಸ್ವಾಗತ ನಿರೂಪಣೆಯನ್ನು ತಾಲೂಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕುಂಬಾರ, ವಂದನಾರೆ್ಣಯನ್ನು ತಾಲೂಕು ಉಪಾಧ್ಯಕ್ಷ ಶ್ರೀಧರ ನಾಡಗೌಡ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 