ಜನರ ಬೇಡಿಕೆಗೆ ತಕ್ಕಂತೆ ಪ್ರಾಮಾಣಿಕ ಕೆಲಸ ಮಾಡುವೆ: ಶಾಸಕ ಪಠಾಣ
Honest work will be done according to people's demand: MLA Pathan
ಶಿಗ್ಗಾವಿ 8: ಜನಸೇವೆ ಮಾಡಲು ಅವಕಾಶ ಕೊಟ್ಟ ಈ ಜನತೆಯ ನಂಬಿಕೆ ಉಳಿಸಿಕೊಂಡು, ಜನರ ಬೇಡಿಕೆಗೆ ತಕ್ಕಂತೆ ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿರದೆ ಪ್ರಾಮಾಣಿಕ ಕೆಲಸ ಮಾಡುವದಾಗಿ ಶಾಸಕ ಯಾಸೀರಖಾನ್ ಪಠಾಣ ಹೇಳಿದರು.
ತಾಲೂಕಿನ ಹುಲಗೂರ ಗ್ರಾಮದ ಸುಪ್ರಸಿದ್ದ ಭಾವೈಕ್ಯತೆಯ ಸೈಯದ್ ಹಜರತ್ ಷಾ ಖಾದ್ರಿ ದರ್ಗಾದಿಂದ ಮುಖ್ಯ ರಸ್ತೆವರೆಗೆ ಮೊದಲ ಹಂತದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜನಸೇವೆ, ಗ್ರಾಮಗಳ ಅಭಿವೃದ್ಧಿ ವಿಷಯಗಳಲ್ಲಿ ಯಾವುದೇ ರಾಜಕೀಯ ಬೆರೆಸುವುದು ಬೇಡ. ಈ ಕ್ಷೇತ್ರದ ಜನತೆ ಭರವಸೆ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದು ಅವರ ಭರವಸೆಗೆ ತಕ್ಕಂತೆ ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ ಎಂದರು.ಶಾಸಕ ಯಾಸೀರಖಾನ ಪಠಾಣ ಹುಲಗೂರ ಗ್ರಾಮದ ಅಂಜುಮನ್ ಕಮೀಟಿ ನೂತನ ಕಛೇರಿಗೆ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ನಂತರ ನೂತನ ಮೌಲಾನಾ ಆಜಾದ್ ಮಾದರಿ ಶಾಲೆ ಪ್ರಾರಂಭಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಗುಡ್ಡಪ್ಪ ಜಲದಿ, ತಾಲೂಕಾಧ್ಯಕ್ಷ ಶೇಖಪ್ಪ ಮಣಕಟ್ಟಿ, ಜಿಲ್ಲಾ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಪ್ರೇಮಾ ಪಾಟೀಲ, ಅಂಜುಮನ್ ಕಮೀಟಿ ಅಧ್ಯಕ್ಷ ರಿಯಾಜ್ ಮುಲ್ಲಾ, ಹುಲಗೂರ ಗ್ರಾಮ ಪಂಚಾಯತ್ ಅಧ್ಯಕ್ಷ ಜಾವೀದ್ ಸವಣೂರ, ಕೆಡಿಪಿ ಸದಸ್ಯ ರುದ್ರ್ಪ ಕೆಳಗಿನಮನಿ, ಸಾತಪ್ಪ ದೇಸಾಯಿ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 