ತೌಸಿಫ್ ಕಲ್ಮನಿ ಅವರಿಗೆ ಗೌರವ ಡಾಕ್ಟರೇಟ್
Honorary Doctorate for Tausif Kalmani
ಹಾವೇರಿ 28: ಜಿಲ್ಲೆಯ ಬ್ಯಾಡಗಿ ನಗರದ ನಿವಾಸಿ ತೌಸಿಫ್ ಜೆ. ಕಲ್ಮನಿ ಅವರಿಗೆ ಶಿಕ್ಷಣ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಹೊಸೂರಿನಲ್ಲಿ ನಡೆದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭದಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದ ಎಸ್.ಯು.ಎಸ್.ಜೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ತೌಸಿಫ್ ಜೆ. ಕಲ್ಮನಿ ಅವರನ್ನು ಶಿಕ್ಷಣ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಡಾ. ಕೆ.ಎ. ಮನೋಕರನ್, ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಮನೋಜ್ ಆರ್., ಡಾ. ರವಿಕುಮಾರ್ ಎಲ್., ಡಾ. ಕಾಳೇಗೌಡ ಹಾಗೂ ಡಾ. ಸುನೀಲ್ ಎಸ್. ಪವಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ತೌಸಿಫ್ ಕಲ್ಮನಿ ಅವರನ್ನು ಅಭಿನಂದಿಸಿದರು.
ಎಸ್.ಯು.ಎಸ್.ಜೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳ ಬಳಗ, ಕೂಬಿಹಾಳ ಗ್ರಾಮದ ಹಿರಿಯರು ಹಾಗೂ ನಾಗರಿಕರು ಅಭಿನಂದನೆ ಸಲ್ಲಿಸಿದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 