ಪದಕ ವಿಜೇತರಿಗೆ ಬಹುಮಾನ ನೀಡಿ ಸನ್ಮಾನಿಸಿದ ಸಕರ್ಾರ
ನವದೆಹಲಿ 05: ಜಕಾತರ್್ ನಲ್ಲಿ ಇತ್ತೀಚಿಗೆ ನಡೆದ ಏಷ್ಯನ್ ಗೇಮ್ಸ್ - 2018 ರ 18 ನೇ ಆವೃತ್ತಿಯಲ್ಲಿ ಪದಕ ವಿಜೇತರಿಗೆ ಕೇಂದ್ರ ಸಕರ್ಾರದ ವತಿಯಿಂದ ಇಂದು ನಗದು ಬಹುಮಾನ ಮಾಡಿ ಸನ್ಮಾನಿಸಲಾಯಿತು.
ಚಿನ್ನದ ಪದಕ ವಿಜೇತರಿಗೆ 40 ಲಕ್ಷ ರೂ. ಬೆಳ್ಳಿ ಹಾಗೂ ಕಂಚು ಪದಕ ವಿಜೇತರಿಗೆ ಕ್ರಮವಾಗಿ 20, ಹಾಗೂ 10 ಲಕ್ಷ ರೂ. ಬಹುಮಾನ ನೀಡಲಾಯಿತು.
ಈ ಬಾರಿಯ ಏಷ್ಯನ್ ಗೇಮ್ಸ್ ನಲ್ಲಿ ಭಾರತ 15 ಚಿನ್ನ, 24 ಬೆಳ್ಳಿ, ಹಾಗೂ 30 ಕಂಚಿನ ಪದಕ ಭೇಟಿಯಾಡುವ ಮೂಲಕ ಪದಕಗಳ ಪಟ್ಟಿ ರಾಷ್ಟ್ರಗಳ ಪೈಕಿ 8 ನೇ ಸ್ಥಾನದಲ್ಲಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ನಾರಿಂದರ್ ಬಾತರ್ಾ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಎಲ್ಲಾ ಪದಕ ವಿಜೇತರನ್ನು ಅಭಿನಂದಿಸಿದ ರಾಜನಾಥ್ ಸಿಂಗ್, ಕ್ರೀಡಾಕ್ಷೇತ್ರದಲ್ಲಿ ಭಾರತ ಜಗತ್ತಿನಲ್ಲಿಯೇ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮುವ ಕಾಲ ದೂರವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಆಥ್ಲೀಟ್ ಗಳ ಪ್ರದರ್ಶನ ನೋಡಿ ನಾನೇ ಬೆರಗಾಗಿದ್ದೇನೆ. ಭಾರತ ಆಥರ್ಿಕವಾಗಿ ಮಾತ್ರವಲ್ಲ, ಕ್ರೀಡೆಯಲ್ಲೂ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದರು. ಅಲ್ಲದೇ, ದೇಶದಲ್ಲಿ ಕ್ರೀಡೆ ಅಭಿವೃದ್ದಿಯಲ್ಲಿ ಸಚಿವ ರಾಥೋರ್ ಅವರ ಬದ್ದತೆಯನ್ನು ರಾಜನಾಥ್ ಸಿಂಗ್ ಶ್ಲಾಘಿಸಿದರು.
ಕ್ರೀಡೆ ಬಗ್ಗೆಗಿನ ರಾಥೋರ್ ಅವರ ಬದ್ದತೆಯನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರ ಬದ್ದತೆಗೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡಬೇಕು ಎಂದು ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 