ಕಾರ್ಮಿಕರ ದಿನಾಚರಣೆ ಅಂಗವಾಗಿ ಸನ್ಮಾನ ಕಾರ್ಯಕ್ರಮ
Honorary program as part of Labor Day celebrations
ಲೋಕದರ್ಶನ ವರದಿ
ಹುಬ್ಬಳ್ಳಿ 03 : ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಹೊನ್ನಪ್ಪ ತಾವರಗೇರಿ ರೋಟರಿ ಭವನದ ಕಾವಲುಗಾರನಾಗಿ ಸೇವೆ ಮಾಡುತ್ತಿರುವ ಮಂಜುನಾಥ್ ರಿತ್ತಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರೆ್ಣ ಮಾಡಿ ಆತ್ಮೀಯವಾಗಿ ಗೌರವದಿಂದ ಸನ್ಮಾನ ಮಾಡಿದರು. ಸೋಹನ ಸುರೇಶ ಹೊರಕೇರಿ,
ರೋಟರಿ ಕ್ಲಬ್ ಹುಬ್ಬಳ್ಳಿ-ಉತ್ತರ ವಲಯದ ಅಧ್ಯಕ್ಷ ಗುರುಪಾದಯ್ಯ ಸಾಲಿಮಠ , ರೋಟರಿ ಕ್ಲಬ್ ಹುಬ್ಬಳ್ಳಿ ಟ್ರಸ್ಟನ ಮಾಜಿ ಅಧ್ಯಕ್ಷ ಪ್ರೊ ಮಹಾಂತೇಶ ಸಜ್ಜನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ , ಸಾಹಿತಿ ಪ್ರೊ ಎಸ್ ಎಂ ಸಾತ್ಮಾರ್ , ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ಶಾಂಭವಿ ಸಾಲಿಮಠ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ , ವಿನಯ್ ರಿತ್ತಿ ಮುಂತಾದವರು ಇದ್ದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ಕಾರ್ಮಿಕರು ಯಾವ ಕ್ಷೇತ್ರದಲ್ಲಿ ಕಾಯಕ ನಿರ್ವಹಿಸುತ್ತಿದ್ದಾರೋ ಅಲ್ಲಿ ನಿಷ್ಟೆ, ಪ್ರಾಮಾಣಿಕತೆ, ಶ್ರದ್ಧೆಯಿಂದ ಆತ್ಮ ಸಂತೃಪ್ತಿಯೊಂದಿಗೆ ಕಾಯಕ ಮಾಡಿ ಸಂಸ್ಥೆಯ, ಮಾಲಿಕರ ಮನಸ್ಸನ್ನು ಗೆಲ್ಲಬೇಕು. ವಿಶ್ವಗುರು ಬಸವಣ್ಣನವರು ಎಲ್ಲ ಕಾಯಕಗಳಿಗೆ ಮಹತ್ವ ನೀಡಿ, ಕಾಯಕಜೀವಿಗಳಿಗೆ ಗೌರವ ತಂದುಕೊಟ್ಟಿದ್ದಾರೆ ಎಂದರು. ಎಲ್ಲ ಕಾರ್ಮಿಕರಿಗೂ ಸುರಕ್ಷತೆ ಹಾಗೂ ಹವಾಮಾನ ವೈಪರಿತ್ಯಕ್ಕೆ ತಕ್ಕಂತೆ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು. ಖಾಸಗಿ ಕ್ಷೇತ್ರಗಳಲ್ಲಿ ಕಾಯಕ ಮಾಡುತ್ತಿರುವ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಸಕಲ ಸೌಲಭ್ಯಗಳು ದೊರಕಬೇಕು. ಎಂಟು ಗಂಟೆ ಕೆಲಸ ಕಾರ್ಯರೂಪಕ್ಕೆ ಬರಬೇಕು.
ಕಾರ್ಮಿಕರ ದಿನಾಚರಣೆ ಮಹತ್ವವನ್ನು ತಿಳಿಸಿಕೊಟ್ಟರು. ದುಡಿಯುವ ವರ್ಗಕ್ಕೆ, ಎಲ್ಲ ಉದ್ಯೋಗಗಳಿಗೆ ಅಪಾರ ಗೌರವ ಸಿಗುವ ಹಾಗೆ ಮಾಡಿದ್ದು 12ನೇ ಶತಮಾನದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು. ಎಲ್ಲ ವರ್ಗದ ಶರಣರನ್ನು ಅನುಭವ ಮಂಟಪದಲ್ಲಿ ಸೇರಿಸಿಕೊಂಡು ವಚನಗಳನ್ನು ರಚನೆ ಮಾಡಿ, ಶ್ರೇಷ್ಟ ಅನುಭಾವಿಗಳನ್ನಾಗಿ ಪರಿವರ್ತನೆ ಮಾಡಿದವರು ವಿಶ್ವಗುರು ಬಸವಣ್ಣನವರು. ಕಾಯಕ ಜೀವಿಗಳು ವಿಶ್ವಗುರು ಬಸವಣ್ಣನವರು ಹಾಗೂ ಬಸವಾದಿ ಶರಣರ ವಚನಗಳನ್ನು ಓದಬೇಕು ಮತ್ತು ವಚನಗಳಲ್ಲಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 