ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದಿಂದ ಸನ್ಮಾನ ಕಾರ್ಯಕ್ರಮ
Honorary program by Horakeri Master Education Foundation
ಹುಬ್ಬಳ್ಳಿ 18: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಧಾರವಾಡ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಪ್ರೊ ಲಲಿತಾ ಮಲ್ಲಿಕಾರ್ಜುನ ಪಾಟೀಲ ಅವರನ್ನು ಭೇಟಿ ಮಾಡಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಹೃದಯ ಸ್ಪರ್ಶಿಯಾಗಿ, ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ಅಭಿನಂದನೆಗಳನ್ನು ಸಲ್ಲಿಸಿ, ಶುಭ ಕೋರಿದರು.
ಸ್ವಸ್ಥ ಸಮರ್ಥ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಉತ್ತಮ ಸಮಾಜ ಮುಖಿ ಕಾರ್ಯಗಳು ಪ್ರೊ ಲಲಿತಾ ಅವರಿಂದ ಜರುಗಲಿ ಎಂದು ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಶುಭ ಕೋರಿದರು. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಆರ್.ಪಾಟೀಲ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಪ್ರಾಧ್ಯಾಪಕ ಡಾ.ಎಚ್.ವಿ.ಬೆಳಗಲಿ, ನಿವೃತ್ ಪ್ರಾಚಾರ್ಯ ಪ್ರೊ ಎನ್.ಆರ್.ಬಾಳಿಕಾಯಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಎಂ.ನುಚ್ಚಿ, ಸುಮಾ ಸುತಗಟ್ಟಿ, ರೇಣುಕಾ ಶಿರಗುಂಬಿ, ರೇಣುಕಾ, ಶಿವಕುಮಾರ ಬಳಿಗಾರ, ಸಂಜೀವಕುಮಾರ ಭೂಶೆಟ್ಟಿ, ಕಿರಣ, ತಿರ್ಲಾಪುರ, ಮರಿಗೌಡ್ರ, ಮುಂತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 