ವಿಧಾನಪರಿಷತ್ ಸದಸ್ಯ ರವಿಕುಮಾರಗೆ ಗೌರವ ಸಮರೆ​‍್ಣ

ವಿಧಾನಪರಿಷತ್ ಸದಸ್ಯ ರವಿಕುಮಾರಗೆ ಗೌರವ ಸಮರೆ​‍್ಣ  Honorary tribute to Legislative Council member Ravikumar

ತಾಳಿಕೋಟಿ 31: ವಿಧಾನ ಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಇವರನ್ನು ನಗರ ಬಿಜೆಪಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.  ಗುರುವಾರ ತಾಲೂಕಿನ ಮಿಣಜಗಿ ಗ್ರಾಮಕ್ಕೆ ಬರವೀಕ್ಷಣೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಕ್ಷದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಗೌರವ ಸಮರೆ​‍್ಣ ಸಲ್ಲಿಸಲಾಯಿತು.  ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ.ಎಸ್‌. ಪಾಟೀಲ ನಡಹಳ್ಳಿ, ಮುಖಂಡರಾದ ಕಾಶಿನಾಥ ಮುರಾಳ, ಮಾನಸಿಂಗ್ ಕೊಕಟನೂರ, ಎಂ.ಎಸ್‌.ಸರಶಟ್ಟಿ, ವಾಸುದೇವ ಹೆಬಸೂರ, ಶಿವಶಂಕರ ಹಿರೇಮಠ, ಪರುಶರಾಮ ಕಟ್ಟಿಮನಿ, ರಾಘವೇಂದ್ರ ಮಾನೆ ಹಾಗೂ ಪಕ್ಷದ ಪದಾಧಿಕಾರಿಗಳು ಇದ್ದರು.