ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನ
Honored by Vishwakarma Employees' Welfare Development Association
ಗದಗ 21: ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ವತಿಯಿಂದ ರವಿವಾರ ನಗರದ ವಿಜಯನಗರ ಬಡಾವಣೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2026 ರ ದಿನದರ್ಶಿಕೆ ಬಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಗದಗ ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ನೂತನ ಅಧ್ಯಕ್ಷರಾದ ಉಮೇಶ ಕೆ. ಅರ್ಕಸಾಲಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಪತ್ರಕರ್ತ ಮೌನೇಶ ಸಿ. ಬಡಿಗೇರ(ನರೇಗಲ್ಲ), ಸುವರ್ಣ ಟಿವಿ ವರದಿಗಾರ ಗೀರೀಶ ಕಮ್ಮಾರ ಮತ್ತು ಅರ್. ಕನ್ನಡ ಟಿವಿ ವರದಿಗಾರ ಮಂಜುನಾಥ ಪತ್ತಾರ ಇವರನ್ನು ಸನ್ಮಾನಿಸಲಾಯಿತು. ಚಿಕ್ಕುಂಬಿಯ ನಾಗಲಿಂಗೇಶ್ವರ ಮಠದ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮೀಜಿ, ವಿಶ್ವಕರ್ಮ ಸುಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸುಜ್ಞಾನಮೂರ್ತಿ ಪಿ., ಪ್ರಮುಖರಾದ ಬಾಬು ಪತ್ತಾರ, ಈಶ್ವರಾಚಾರ್ಯ ಎಂ. ಪಿ., ರಾಜಗೋಪಾಲ ಡಿ. ಕಡ್ಲಿಕೊಪ್ಪ, ಎ. ಎನ್. ಬಡಿಗೇರ, ಕೆ. ಎಸ್. ಬಡಿಗೇರ, ಬಿ. ಎಂ. ಬಡಿಗೇರ, ಸೇರಿದಂತೆ ಗಣ್ಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 