26 ವರ್ಷಗಳ ಸೇವೆಗೆ ಗೌರವ; ರಥೋತ್ಸವ, ಸನ್ಮಾನ ಹಾಗೂ ಅಭಿನಂದನಾ ಸಮಾರಂಭ
Honoring 26 years of service; Chariot festival, honors and felicitation ceremony
ಮುಗಳಖೋಡ 30: ಪಟ್ಟಣದ ಪಿಎಂ ಶ್ರೀ ಸರ್ಕಾರಿ ಕನ್ನಡ-ಇಂಗ್ಲಿಷ್ ಮಾಧ್ಯಮ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಾರೂತ್ಯಪ್ಪ ಕಾಳಪ್ಪ ಪಟ್ಟಾರ ಅವರ ನಿವೃತ್ತಿ ಅಂಗವಾಗಿ ಅದ್ದೂರಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಶ್ರೀ ಯಲ್ಲಾಲಿಂಗೇಶ್ವರ ಪ್ರಭು ಮಹಾರಾಜರ ಗದ್ದುಗೆಗೆ ದರ್ಶನ ಪಡೆದ ಬಳಿಕ, ಪಟ್ಟಾರ ಅವರನ್ನು ಸಕಲ ವಾದ್ಯವೃಂದದೊಂದಿಗೆ ಶ್ರೀಮಠದಿಂದ ಶಾಲೆಯವರೆಗೆ ರಥದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಹಾಗೂ ಅಭಿಮಾನಿಗಳು ಪಟ್ಟಾರ ಅವರನ್ನು ಸನ್ಮಾನಿಸಿ ಗೌರವಿಸಿದರು. ಮುಗಳಖೋಡದಲ್ಲಿ 26 ವರ್ಷಗಳ ಕಾಲ ಶಿಕ್ಷಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಸಲ್ಲಿಸಿದ ಅವರ ಪ್ರಾಮಾಣಿಕ ಮತ್ತು ಸಮರ್ಿತ ಸೇವೆಯನ್ನು ವಕ್ತಾರರು ಶ್ಲಾಘಿಸಿದರು.
ನಿವೃತ್ತ ಜೀವನ ಸುಖ, ಶಾಂತಿ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿ, ನಂತರ ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀಮಠದ ಜಗದೀಶ ಮಹಾರಾಜರು, ಅರ್ಚಕರು, ಶಾಲೆಯ ಶಿಕ್ಷಕ ವೃಂದ, ಉಸ್ತುವಾರಿ ಸಮಿತಿ ಸದಸ್ಯರು, ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 