ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
Honors to new office bearers of the Working Journalists' Association
ದೇವರಹಿಪ್ಪರಗಿ 23: ಉತ್ಕೃಷ್ಟ ಸಮಾಜ ನಿರ್ಮಾಣದಲ್ಲಿ ಮಾದ್ಯಮ ಪಾತ್ರ ಹಿರಿದಾಗಿದ್ದು, ಸಮಾಜಮಖಿ ಕಾರ್ಯಗಳಿಗೆ ಸಾಕ್ಷಿಯಾಗಿರುವ ಪತ್ರಕರ್ತರು ಸಮ ಸಮಾಜದ ಪ್ರತಿಬಿಂಬವಾಗಿದ್ದಾರೆ ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಪ್ರಭುಗೌಡ ಲಿಂಗದಳ್ಳಿ ಹೇಳೀದರು.
ನೂತನವಾಗಿ ಕಾನಿಪ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಅನುಗ್ರಹ ಕಣ್ಣಿನ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಆಧಾರ ಸ್ಥಂಭವಾಗಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ಅತ್ಯಂತ ಕ್ರೀಯಾಶೀಲತೆಯಿಂದ ಕಾರ್ಯ ನಿರ್ವಹಣೆ ಮೂಲಕ ಸಮಾಜ ಸೇವೆ ಮಾಡುತ್ತಾರೆ. ದಿನದ 24 ಗಂಟೆ ಜಾಗೃತ ವಹಿಸಿ ಸುದ್ದಿ ನೀಡುವ ಕಾಯಕದಲ್ಲಿ ತೊಡಗಿರುವ ಕಾರ್ಯ ಶ್ಲಾಘನೀಯವಾಗಿದೆ. ಪ್ರತಿಯೊಂದು ಹಂತದಲ್ಲೂ ಸಂಘಕ್ಕೆ ಸಹಕಾರ ನೀಡಲಾಗುವುದು ಎಂದರು.
ಅತಿಥಿಯಾಗಿ ಪಾಲ್ಗೊಂಡಿದ್ದ ದೇವರಹಿಪ್ಪರಗಿ ತಾಲೂಕು ಕ. ಸಾ. ಪ. ನಿಕಟಪೂರ್ವ ಅಧ್ಯಕ್ಷ ಕಬೂಲ್ ಕೊಕಟನೂರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವ ಪತ್ರಿಕಾ ಸಹೋಧರರು ಪ್ರತಿಯೊಂದು ವಿಷಯಗಳನ್ನು ಜನಸಾಮಾನ್ಯರಿಗೆ ಮಾಹಿತಿ ಒದಗಿಸಲು ಶ್ರಮಿಸುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಲೇ ಯಾವೊಂದು ಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥ ಸೇವೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಉತ್ತಮ ಸುದ್ದಿಗಳ ಮೂಲಕ ಸಮಾಜ ಪರಿವರ್ತನೆಯಂತಹ ಕಾರ್ಯಗಳು ನಡೆಯಲಿ ವಸ್ತುನಿಷ್ಠ ಸುದ್ದಿಗಳ ಮೂಲಕ ನಿಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಗೊಳಪಡುವ ದೇವರಹಿಪ್ಪರಗಿ ತಾಳಿಕೋಟಿ ಹಾಗೂ ಬಸವನಬಾಗೇವಾಡಿ ತಾಲೂಕುಗಳ ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ದೇವರ ಹಿಪ್ಪರಗಿ.ತಾಲೂಕು ಅಧ್ಯಕ್ಷರಾದ ಸಂಗಮೇಶ ಉತ್ನಾಳ, ಬಸವರಾಜ ಗಣಾಚಾರಿ, ಮುನ್ನಾ ಸಿರಸಗಿ, ದತ್ತಾತ್ರೆಯ ಹೊಸಮಠ,ಸಂಗನೌಡ ಪಾಟೀಲ, ಉದಯ ಯಾಳವಾರ, ಶ್ರೀಧರ ನಾಡಗೌಡ, ಮಂಜುನಾಥ ಬ್ಯಾಕೋಡ. ಶಿವಾನಂದ ಕುಂಬಾರ. ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಶಿವಾನಂದ ಸಜ್ಜನ, ಈರಣ್ಣ ಝಳಕಿ, ಹುಸೇನ್ ಕೊಕಟನೂರ, ಮಳೆಪ್ಪಗೌಡ ಬಿರಾದಾರ ಸೇರಿದಂತೆ ಮತ್ತೀತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 