ಸರ್ವಜ್ಞ ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಸನ್ಮಾನ
Honors to students of Sarvajna Vidyapeeth
ತಾಳಿಕೋಟಿ 23 : ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮದ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಷಯಾಧಾರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಸಂಸ್ಥೆ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಫೆಬ್ರವರಿ 21ರಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ತಾಲೂಕಾ ಘಟಕ ತಾಳಿಕೋಟಿ. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್. ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಮುದ್ದೇಬಿಹಾಳ ತಾಲೂಕ ಮಟ್ಟದ ವಿಷಯಧಾರಿತ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಮಾರು 39 ಪ್ರೌಢ ಶಾಲೆಗಳು ಭಾಗವಹಿಸಿದ್ದವು, ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಭಿನಂದನೆ: ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ. ಮಂಗಳೂರ,ಮುಖ್ಯಗುರು ಗಳಾದ ಸಂತೋಷ ಪವಾರ, ಹಿರೂರ ಸರ್ಕಾರಿ ಶಾಲೆ, ಎಸ್ ಡಿ ಎಮ್ ಸಿ ಅಧ್ಯಕ್ಷ ಸಂಗನಗೌಡ ಅಸ್ಕಿ,ಹಾಗೂ ಸರ್ವ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 