ಗುರುಗಳಿಗೆ ಗೌರವ, ಸ್ನೇಹಿತರ ಪುನರ್ಮಿಲನ: 2013-14 ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
Honouring Teachers, Reuniting Friends: 'Guruvandana' Programme by 2013-14 SSLC Students
ಲಕ್ಷ್ಮೇಶ್ವರ, ಆ.5: ತಾಲೂಕಿನ ಹುಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2013-14ನೇ ಸಾಲಿನ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ‘ಸವಿಜೇನು ಸ್ನೇಹ ಬಳಗ’ದ ವತಿಯಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಸಿದ್ದಯ್ಯ ಅಮೋಘ ಮಠದ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
2013-14ನೇ ಸಾಲಿನ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಮಾರ್ಗದರ್ಶನ ನೀಡಿದ ಗುರುಗಳಾದ ಜಿ.ಎಸ್. ರಾಮಚಂದ್ರ, ಮಂಜುನಾಥ ಭೋವಿ, ಎಸ್.ಎ. ರಾಜೋಳಿ ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕ ಜಿ.ಎಸ್. ರಾಮಚಂದ್ರ, “ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿನ ಹಿಂದೆ ತಂದೆ-ತಾಯಿ ಹಾಗೂ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಲವು ವರ್ಷಗಳ ಬಳಿಕವೂ ತಮ್ಮ ಗುರುಗಳನ್ನು ಸ್ಮರಿಸಿ ಗೌರವಿಸುತ್ತಿರುವ ಹಳೆಯ ವಿದ್ಯಾರ್ಥಿಗಳ ಈ ಕಾರ್ಯ ಇತರರಿಗೆ ಮಾದರಿಯಾಗಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ಎಂ.ಎಂ. ಗುಟ್ಟಲ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಎಂ.ಎಂ. ಗಾಡಗೋಳಿ, ಗುರುನಾಥರೆಡ್ಡಿ ದ್ಯಾವಣೂರು, ಫಕೀರೇಶ ರಗಟಿ, ಬಸವರಾಜ ಮೆಕ್ಕಿ, ರಮೇಶ್ ಹರಿಜನ, ಹಜಾರೇಸಾಬ್ ನದಾಫ್ ಸೇರಿದಂತೆ ‘ಸವಿಜೇನು ಸ್ನೇಹ ಬಳಗ’ದ ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 