ಶಿವಶರಣೆ ಡಾ.ನೀಲಮ್ಮ ತಾಯಿ ಅಸುಂಡಿ ಆಶೀರ್ವಾದ ಪಡೆದ ಹೊರಕೇರಿ ಸಮಿತಿ
Horakeri Committee receives blessings from Shivasharane Dr. Neelamma Asundi
ಲೋಕದರ್ಶನ ವರದಿ
ಹುಬ್ಬಳ್ಳಿ 13: ಹಗಲಿರುಳು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸಧೃಡ ಸಮಾಜ ನಿರ್ಮಾಣಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಗದಗ ಆದಿಶಕ್ತಿನಗರ, ಆಧ್ಯಾತ್ಮ ವಿದ್ಯಾಶ್ರಮದ ಶ್ರೀ ಶಿವಶರಣೆ ಡಾ.ನೀಲಮ್ಮತಾಯಿ ಅಸುಂಡಿ ಅವರು ಹುಬ್ಬಳ್ಳಿಯಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಶುಭ ಸಂದರ್ಭದಲ್ಲಿ ಶಿವಶರಣೆ ಡಾ.ನೀಲಮ್ಮತಾಯಿ ಅಸುಂಡಿ ಅವರನ್ನು ಭೇಟಿ ಮಾಡಿದ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ, ಸದಸ್ಯರು ಮಾತಾಜಿ ಅವರಿಗೆ ಮಾಲಾರೆ್ಣ ಮಾಡಿ ದರ್ಶನ ಆಶೀರ್ವಾದ ಪಡೆದು ಆತ್ಮೀಯವಾಗಿ ಗೌರವದಿಂದ ಶ್ರದ್ಧಾಭಕ್ತಿಯಿಂದ ನಮನಗಳನ್ನು ಸಲ್ಲಿಸಿದರು. ಮಾತಾಜಿ ಅವರ ಆಶೀರ್ವಾದ ಸದಾವಕಾಲ ಭಕ್ತರ ಮೇಲೆ ಇರಲಿ ಎಂದು ಆಶಯ ವ್ಯಕ್ತಪಡಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ, ವಿಜಿಪಾಟೀಲ್, ವೀರಣ್ಣಹೂಲಿ, ಆರ್ಕೆಪಾಟೀಲ್, ಡಿ.ಸಿ.ರಂಗರಡ್ಡಿ, ಮೋಹನ್ಹೊಸಮನಿ, ಗಣ್ಯರು, ಮುಂತಾದವರು ಭಾಗವಹಿಸಿದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 