ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೋರಾಟ ಸೇವಾರತ್ನ ಪ್ರಶಸ್ತಿ ಪ್ರದಾನ
Horata Sevaratna Award presented at Kannada Sahitya Sammelana
ಲೋಕದರ್ಶನ ವರದಿ
ಹಾವೇರಿ 26: ರಾಜ್ಯ ಹಾಗೂ ಜಿಲ್ಲೆಯಲ್ಲಿನ ನನ್ನ ಸಾಮಾಜಿಕ ಸೇವಾ ಮನೋಭಾವನೆ,ದಕ್ಷತೆ ಮತ್ತು ಪ್ರಮಾಣಿಕತೆಯನ್ನು ಮೆಚ್ಚಿ ಹಾಗೂ ಗುರುತಿಸಿ ರಾಜ್ಯ ಮಟ್ಟದ ಕರುನಾಡ ಹೋರಾಟ ಸೇವಾರತ್ನ ಪ್ರಶಸ್ತಿಯನ್ನು ನೀಡಿದ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ಬೆಂಗಳೂರು ಇದರ ಎಲ್ಲಾ ಪದಾಧಿಕಾರಿಗಳಿಗೆ ಪ್ರಶಸ್ತಿ ಪುರಸ್ಕೃತರಾದ ಉಡಚಪ್ಪ ಮಾಳಗಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ನಾನು ನಿರಂತರವಾಗಿ ದಲಿತಪರ ಹೋರಾಟಗಳನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ-ಗುರುತಿಸಿ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ದ ರಾಜ್ಯಾಧ್ಯಕ್ಷರಾದ ಎಸ್.ಡಿ ಮುಡೆಣ್ಣವರ ಹಾಗೂ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳು ದಿ,25 ರಂದು ಹಾವೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾಹಿತಿಗಳಾದ ಜಿ.ಎಂ.ಓಂಕಾರಣ್ಣನವರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರುಗಿದ 2ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನನಗೆ ರಾಜ್ಯ ಮಟ್ಟದ ಕರುನಾಡ ಹೋರಾಟ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ನೀಡಿದ ಮತ್ತು ಕನ್ನಡ ನೆಲ,ಜಲ ಹಾಗೂ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಬೆಳೆಸುವ ಕೆಲಸ ಮಾಡುತ್ತಿರುವ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ದ ಕನ್ನಡ ನಾಡು ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಸಹಕಾರ ನೀಡೋಣ.ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಹಕಾರ ನೀಡಿದ ಸರ್ವರಿಗೂ ಅಭಿನಂದನೆಗಳನ್ನು ಪ್ರಶಸ್ತಿ ಪುರಸ್ಕೃತರಾದ ಉಡಚಪ್ಪ ಮಾಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 