ಲಕ್ನೋ: ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಾಟರ್ಿ (ಬಿಎಸ್ಪಿ) ವರಿಷ್ಠೆ ಮಾಯಾವತಿ, ಬಿಜೆಪಿ ಅಧಿಕಾರ ಮತ್ತು ಹಣ ಬಲದಿಂದ ಶಾಸಕರನ್ನು ಸೆಳೆಯುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದೆ ಎಂದು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ, ಕೇಂದ್ರದಲ್ಲಿ ಬಿಜೆಪಿ, ಇವಿಎಂ ಅಕ್ರಮ ಮತ್ತು ಹಣ ಬಲದ ಮೂಲಕ ಅಧಿಕಾರಕ್ಕೆ ಬಂದಿದೆ. ಈಗ ವಿವಿಧ ರಾಜ್ಯಗಳಲ್ಲಿರುವ ಬಿಜೆಪಿಯೇತರ ಸರ್ಕಾರ್ ರಗಳನ್ನು ಪತನಗೊಳಿಸುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಸೋತ ಹತಾಶೆಯನ್ನು ಹೊರಹಾಕುತ್ತಿದೆ.
ಇದನ್ನು ಬಿಎಸ್ಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಕೇಸರಿ ಪಡೆಯ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಎಸ್ಪಿ ಅಧ್ಯಕ್ಷೆ, ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸಮಪರ್ಕವಾಗಿ ಜಾರಿಗೊಳಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.