ಹೊಸಪೇಟೆ: ಕುಡಿಯುವ ನೀರಿನ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
Hosapete: Deputy Commissioner directs speedy completion of drinking water project works
ವಿಜಯನಗರ (ಹೊಸಪೇಟೆ), ಜುಲೈ 14: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಫ್‌ಎಸ್ಟಿಪಿ ಮತ್ತು ಎಸ್ಟಿಪಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ಥಳೀಯ ಆಡಳಿತದ 24ಥ7 ಕುಡಿಯುವ ನೀರಿನ ಯೋಜನೆ (ಅಮೃತ್ 2.0 ಯೋಜನೆ) ಹಾಗೂ ಒಳಚರಂಡಿ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಲಕ್ಷ್ಯವಿಲ್ಲದೆ ಕೈಗೊಳ್ಳಬೇಕು. ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳಬೇಕು. ಗುತ್ತಿಗೆದಾರರು ನೆಪಗಳನ್ನು ಹೇಳಿ ಕಾಮಗಾರಿ ವಿಳಂಬ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಗರದ ರಸ್ತೆ ಬದಿಯ ಪೆಟ್ಟಿಗೆ ಅಂಗಡಿಗಳ ಅತಿಕ್ರಮಣದಿಂದ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಅಡ್ಡಿಯಾಗುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಅತಿಕ್ರಮಣದಾರರೊಂದಿಗೆ ಸಮನ್ವಯ ಸಾಧಿಸಿ ಸ್ಥಳವನ್ನು ತಕ್ಷಣ ತೆರವುಗೊಳಿಸಿ ಆಗಸ್ಟ್ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಡಿಸೆಂಬರ್ ವೇಳೆಗೆ ಸಂಪೂರ್ಣ ಯೋಜನೆ ಮುಕ್ತಾಯಗೊಳಿಸುವ ಗುರಿ ಹೊಂದಬೇಕು. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳಿಗೆ ಸಂಬಂಧಿಸಿದಂತೆ ಕೇವಲ ದಾಖಲೆಗಳಲ್ಲಿ ಪ್ರಗತಿ ತೋರಿಸದೆ, ವಾಸ್ತವಿಕವಾಗಿ ಸುಧಾರಣೆ ಕಾಣುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕಾಮಗಾರಿಗಳ ವಿಳಂಬಕ್ಕೆ ತಾಂತ್ರಿಕ ಕಾರಣಗಳನ್ನು ನೀಡದೆ, ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನೀರು ಶುದ್ಧೀಕರಣ ಘಟಕ ಮತ್ತು ಓವರ್ಹೆಡ್ ಟ್ಯಾಂಕ್ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಕಾರ್ಯವನ್ನು ವೇಗಗೊಳಿಸಬೇಕು ಎಂದರು.
ಕಾರ್ಮಿಕರ ಕೊರತೆ ಮತ್ತು ಅಗತ್ಯ ಸಾಮಗ್ರಿಗಳ ಪೂರೈಕೆಯ ವಿಳಂಬ ತಪ್ಪಿಸಲು ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಪರಿಣಿತ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿಗೆ ವೇಗ ನೀಡಬೇಕು. ಇನ್ನು ಯಾವುದೇ ಕಾಲಾವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 