ಶಾಸಕ ಗಣೇಶ ಸಮ್ಮುಖದಲ್ಲಿ ಹೊಸಕೋಟೆ ಜಗದೀಶ ಜನ್ಮದಿನಾಚರಣೆ
Hoskote Jagadeesh's birthday celebration in the presence of MLA Ganesh
ಕಂಪ್ಲಿ 12: ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಸಭಾಂಗಣದಲ್ಲಿ ಶಾಸಕ ಜೆ.ಎನ್.ಗಣೇಶ ಅವರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಅವರ ಜನ್ಮದಿನಾಚರಣೆನ್ನು ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಸಂಭ್ರಮದಿಂದ ಗುರುವಾರ ಆಚರಿಸಲಾಯಿತು.
ನಂತರ ಶಾಸಕ ಗಣೇಶ ಮಾತನಾಡಿ, ಜಗದೀಶ ಅವರು ಸಮಾಜ ಸೇವೆಯೊಂದಿಗೆ ಜನರ ಜೊತೆಯಲ್ಲಿದ್ದಾರೆ. ವೀರಶೈವ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನಷ್ಟು ಒಳ್ಳೆಯ ಸ್ಥಾನಗಳನ್ನು ಹೊಂದಲಿ. ಇವರ ಆಯಸ್ಸು, ಆರೋಗ್ಯವು ಸದಾ ಉಸಿರಾಗಿರಲಿ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಶಿವುಪುತ್ರ್ಪ, ಮೆಟ್ರಿ ರಾಜ, ಹೆಚ್.ಶಂಕ್ರ್ಪ, ಹೆಚ್.ಹಂಪಾರೆಡ್ಡಿ, ಬಟಾರಿ ಪ್ರಮೋದ್, ಎಂ.ಜಡೆಪ್ಪ, ಜಿ.ಗಣೇಶ, ಹರಿಜನ ಗಂಗಾಧರ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಅತಿಥಿ ಗೃಹ : ಇಲ್ಲಿನ ಅತಿಥಿ ಗೃಹದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್ ನೇತೃತ್ವದಲ್ಲಿ ಹೊಸಕೋಟೆ ಜಗದೀಶ ಅವರ ಹುಟ್ಟು ಹಬ್ಬ ಆಚರಿಸಲಾಯಿತು. ಈ ವೇಳೆ ಗ್ರಾಪಂ ಮಾಜಿ ಉಪಾಧ್ಯಕ್ಷ ಕೆ.ರಾಮಸ್ವಾಮಿ, ಮುಖಂಡರಾದ ಯಲ್ಲಪ್ಪ, ನಾಗರಾಜ, ಗಂಗಾಧರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 