ಲೋಕದರ್ಶನ ವರದಿ
ಹೊಸಪೇಟೆ 05: ಮುಂಬರುವ ಜ.11 ಮತ್ತು 12ರಂದು ಹಮ್ಮಿಕೊಳ್ಳಲಾಗಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಹಂಪಿ ಉತ್ಸವದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಂಗಳವಾರ ಪರಿಶೀಲಿಸಿದರು.
ಮುಖ್ಯ ವೇದಿಕೆ ನಿರ್ಮಿಸಲಾಗುವ ಎದುರು ಬಸವಣ್ಣ ಹತ್ತಿರದ ಸ್ಥಳ, ಮಾಧ್ಯಮ ಗ್ಯಾಲರಿ, ಗ್ರೀನ್ ರೂಮ್, ಮಳಿಗೆಗಳ ಸ್ಥಳಗಳನ್ನು ಪರಿಶೀಲಿಸಿದರು. ಕಳೆದ ಉತ್ಸವದ ಸಂದರ್ಭದಲ್ಲಿ ಕೈಗೊಂಡ ಸಿದ್ಧತೆಗಳ ಮಾದರಿಯಲ್ಲಿಯೇ ಈ ಬಾರಿಯೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಡಿಸಿ ನಕುಲ್ ಸೂಚಿಸಿದರು.
ನಂತರ ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ನಿಮರ್ಿಸಲಾಗುವ ವೇದಿಕೆ ಸ್ಥಳ, ಮೆಹಂದಿ ಮತ್ತು ರಂಗೋಲಿ ಸ್ಪಧರ್ೆಗಳ ಸ್ಥಳಗಳನ್ನು ಪರಿಶೀಲಿಸಿದರು. ಸ್ವಚ್ಛತೆ ಹಾಗೂ ಇತರ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿದರ್ೆಶನ ನೀಡಿದರು.
ಕಡಲೇಕಾಳು ಗಣೇಶ ಹಾಗೂ ಸಾಸಿವೆ ಕಾಳು ಗಣೇಶ ಬಳಿ ನಿಮರ್ಿಸಲಾಗುವ ವೇದಿಕೆ ಸ್ಥಳ ಪರಿಶೀಲಿಸಿದರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿಮರ್ಿಸಲು ಉದ್ದೇಶಿಸಲಾಗಿದೆ.
ಜಿಪಂ ಸಿಇಒ ಕೆ.ನಿತೀಶ್, ಹೊಸಪೇಟೆ ಸಹಾಯಕ ಆಯುಕ್ತ ಶೇಖ್ ತನ್ವೀರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿಯುಡಿಸಿ ಯೋಜನಾ ನಿದರ್ೆಶಕ ರಮೇಶ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎನ್.ಲೋಕೇಶ, ಎಎಸ್ ಐ ಅಧಿಕಾರಿ ಕಾಳಿಮುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿದರ್ೆಶಕ ರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೆಶಕ ಬಿ.ಕೆ.ರಾಮಲಿಂಗಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.