ಹೊಸಪೇಟೆ: ಬೈಲುವದ್ದಿಗೆರೆ ಗ್ರಾಮದಲ್ಲಿ ಚಿರತೆ ದಾಳಿ
ಹೊಸಪೇಟೆ 18: ತಾಲೂಕಿನ ಬೈಲುವದ್ದಿಗೆರೆ ಗ್ರಾಮದ ಹೊಲವೊಂದರಲ್ಲಿ ಕಟ್ಟಿಹಾಕಿದ್ದ ಎತ್ತನ್ನು ಬುಧವಾರ ಚಿರತೆ ಕೊಂದು ಹಾಕಿದೆ. ಗ್ರಾಮದ ರೈತ ಉಳ್ಳಾಗಡ್ಡಿ ವೀರಣ್ಣಗೆ ಸೇರಿದ ಎತ್ತು ಸತ್ತಿದೆ. ಬೈಲುವದ್ದಿಗೆರೆ, ಗುಂಡ್ಲುವದ್ದಿಗೆರೆ ಪ್ರದೇಶಗಳಲ್ಲಿ ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೈತರು ಭಯದಲ್ಲಿ ಜೀವನ ನಡೆಸುವಂತಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷಿಸಿದ್ದಾರೆ. ಇದರಿಂದ ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ. ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಚಿರತೆ ದಾಳಿಯಿಂದ ಜಾನುವಾರು ಕಳೆದುಕೊಂಡ ರೈತರಿಗೆ ಅರಣ್ಯ ಇಲಾಖೆ ಜಾನುವಾರುಗಳನ್ನೇ ಪರಿಹಾರವಾಗಿ ನೀಡಬೇಕು ಎಂದು ರೈತರಾದ ಉಳ್ಳಾಗಡ್ಡಿ ವೀರಣ್ಣ, ಶಿವಕುಮಾರ ಆಗ್ರಹಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 