ಹೊಸಪೇಟೆ: ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ

ಲೋಕದರ್ಶನ ವರದಿ

ಹೊಸಪೇಟೆ 22: ಬೆಂಗಳೂರಿನ ಫ್ರೇಡಂ ಪಾರ್ಕ್ಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಕೃತಿದಹಿಸಿ ಪ್ರತಿಭಟನೆ ನಡೆಸಿದರು. 

ನಗರದ ನಾನಾ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಯುವತಿ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. 

ನಂತರ ಸ್ಥಳೀಯ ಶಾನಭಾಗ ವೃತ್ತದಲ್ಲಿ ಜಮಾಯಿಸಿ ಕೆಲ ಕಾಲ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ನೆಲ, ಜಲ, ಅನ್ನವನ್ನುಂಡು ದೇಶ ದ್ರೋಹ ಕೃತ್ಯಗಳಿಗೆ ಕೈಹಾಕುತ್ತಿರುವುದು ಅಪರಾಧವಾಗಿದೆ. ಶತ್ರು ರಾಷ್ಟ್ರದ ಪರ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು, ಇಂತವರ ವಿರುದ್ಧ ಹಾಗೂ ಇಂತಹ ದುಷ್ಯಕೃತ್ಯಗಳಿಗೆ ಕುಮ್ಮಕ್ಕು ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.