ಮಂಗಳೂರು, ಜ 25, ಕಡಬಾ ತಾಲ್ಲೂಕಿನಲ್ಲಿ ಹೋಟೆಲ್ ಮಾಲೀಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಮತ್ತಪ್ಪ ಎಂದು ಗುರುತಿಸಲಾಗಿದೆ. ಇಲ್ಲಿನ ಇಟ್ಟೂರು ಗ್ರಾಮದ ಅರಣ್ಯ ಭೂಮಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಶವ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.