ಮನೆ ನಿರ್ಮಾಣ ಭೂಮಿ ಪೂಜೆ
House construction land worship
ರಾಣೇಬೆನ್ನೂರು 07: ನಗರದ ಕುರಬಗೇರಿಯ ಕಾರ್ಯಕ್ಷೇತ್ರದ ಉಮಾ ಮಡಿವಾಳರ ಅವರಿಗೆ ವಾತ್ಸಲ್ಯ ಮನೆ ಮಂಜೂರಾಗಿದ್ದು ವಾತ್ಸಲ್ಯ ಮನೆ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಶಿವರಾಯ ಪ್ರಭು ಅವರು, ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದವರು ಪ್ರತಿಯೊಬ್ಬರ ಕನಸು ಮನೆ ಕಟ್ಟುವುದು. ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ಎನ್ನುವ ಗಾದೆ ಮಾತು ಇಂದಿನ ದಿನಮಾನಗಳಲ್ಲಿ ವಾಸ್ತವ ಸಂಗತಿ. ಯೋಜನೆಯಲ್ಲಿ ವಾತ್ಸಲ್ಯ ಮನೆ ನಿರ್ಮಾಣವಾಗುತ್ತಿರುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಯೋಜನಾಧಿಕಾರಿ ಶ್ರೀಮತಿ ಸುಧಾ, ಯೋಜನಾಧಿಕಾರಿ ಮಂಜುನಾಥ ಗೌಡ, ಎಮ್.ಕೃಷಿ ಮೇಲ್ವಿಚಾರಕ ಮಹಾಂತೇಶ, ಜ್ಞಾನ ವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಮತ್ತು ನಗರದ ಗಣ್ಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 