ಗೃಹಿಣಿ ಆತ್ಮಹತ್ಯೆ ಗೆ ಶರಣು

ತುಮಕೂರು, ಫೆ 29 :    ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿಗೆ ಶರಣಾದ ಘಟನೆ  ನಗರದ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

23 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. 

ಗುಬ್ಬಿ ಮೂಲದವರಾದ ಕಾವ್ಯ, ಕಳೆದ ನಾಲ್ಕು ವರ್ಷಗಳ ಹಿಂದೆ ಅಂಜನ್ ಎಂಬುವರೊಂದಿಗೆ ವಿವಾಹವಾಗಿದ್ದರು.

ಪತಿ  ಅಂಜನ್ ವರದಕ್ಷಿಣೆಗಾಗಿ ಕಾವ್ಯಗೆ  ಪೀಡಿಸುತ್ತಿದ್ದು ಇದರಿಂದ ಬೇಸತ್ತು ಆಕೆ ನೇಣು  ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ಪತಿ ಅಂಜನ್ ವಿರುದ್ಧ  ವರದಕ್ಷಿಣೆ ಕಿರುಕುಳ ಆರೋಪ ಮಾಡುತ್ತಿದ್ದಾರೆ.

ಶುಕ್ರವಾರ ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಸದ್ಯ ಘಟನಾ ಸ್ಥಳಕ್ಕೆ  ಪೊಲೀಸರು ಭೇಟಿ ನೀಡಿ, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಘಟನೆ ಗೆ ಸಂಬಂಧಿಸಿದಂತೆ

ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.