ದಿ, 16 ಮತ್ತು 17 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಮೇ ಸಾಹಿತ್ಯ ಮೇಳ
Huge May Literary Festival in Hubli on 16th and 17th
ಕೊಪ್ಪಳ 12: ಇದೇ ತಿಂಗಳ ದಿ, 16 ಶನಿವಾರ ಮತ್ತು ದಿ, 17 ರ ರವಿವಾರ ಎರಡು ದಿನಗಳ ಕಾಲ ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದ ನರಗುಂದ ನವಲಗುಂದು ರೈತ ಬಂಡಾಯ ವೇದಿಕೆಯಲ್ಲಿ ಸಾಠಧಾನಿಕಾ ಪ್ರಜಾ ಸತ್ತೆಯ ಮೇಲಿನ ದಾಳಿ ಚಹರೇ ಮತ್ತು ಹೂರ ದಾರಿಗಳು ಎಂಬ ವಿಷಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಮ ಸಮಾಜ ನಿರ್ಮಾಣ ಮಾಡಲು 12ನೇ ಮೇ ಸಾಹಿತ್ಯ ಮೇಳ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕೊಪ್ಪಳದ ಹಿರಿಯ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರು ತಿಳಿಸಿದರು, ಅವರು ಮಂಗಳವಾರ ಇಲ್ಲಿನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ದಲ್ಲಿ ಏರಿ್ಡಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕಾರ್ಯಕ್ರಮದ ವಿವರಣೆ ನೀಡಿದರು, ಮುಂದುವರೆದು ಮಾತನಾಡಿ ಸದರಿ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಜನ ಸಮಾನ್ ಮನಸ್ಕರು ಒಂದೆಡೆ ಸೇರಲಿದ್ದಾರೆ.
ನಮ್ಮ ಕೊಪ್ಪಳ ಜಿಲ್ಲೆಯಿಂದ ಸಹ ನೂರಾರು ಸಂಖ್ಯೆಯಲ್ಲಿ ಸಮಾನ ಮನಸ್ಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದ ಅವರು ಲಡಾಯಿ ಪ್ರಕಾಶನ ಗದಗ್, ಚಿತ್ತಾರ ಕಲಾ ಬಳಗ ಧಾರವಾಡ, ಕವಿ ಪ್ರಕಾಶನ ಕವಲಕ್ಕಿ, ಮೇ ಸಾಹಿತ್ಯ ಮೇಳ ಹುಬ್ಬಳ್ಳಿ ಬಳಗ ಇವುಗಳ ಸಠುುಕ್ತ ಆಶ್ರಯದಲ್ಲಿ ಜರುಗಲಿರುವ ಮೇ ಸಾಹಿತ್ಯ ಮೇಳ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರ್ಯಕ್ರಮ ಮತ್ತು ಮೇಳ ಯಶಸ್ವಿಗೊಳಿಸಬೇಕೆಂದು ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮನವಿ ಮಾಡಿಕೊಂಡರು ಸದರಿ ಕಾರ್ಯಕ್ರಮದಲ್ಲಿ ಹಿರಿಯ ಹೋರಾಟಗಾರರು ಚಿಂತಕರು ಪಾಲ್ಗೊಂಡು ತಮ್ಮ ವಿಶೇಷ ಉಪನ್ಯಾಸ ನೀಡಲಿದ್ದಾರೆ, ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು, ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಚಿಂತಕರು ಮತ್ತು ಹೋರಾಟಗಾರರು ಗಳಾದ ಟಿ ,ರತ್ನಾಕರ, ಸುಖರಾಜ್ ತಾಳಕೇರಿ, ಶರಣಪ್ಪ ಬಾಚಲಾಪುರ, ಗೋವಿಂದರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 