ಬೃಹತ್ ಆರೋಗ್ಯ ಮೇಳ ಮಾ. 23 ರಂದು

Huge health fair on March 23

ಬೆಳಗಾವಿ,ಮಾ.20: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆಯುಷ್ಯ ಇಲಾಖೆ, ವಿವಿಧ ಸಂಘ ಸಂಸ್ಥೆಗಳು, ವಿವಿಧ ಆಸ್ಪತ್ರೆಗಳು, ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್‌ 23 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಕ್ರೀಡಾಂಗಣ ಸವದತ್ತಿಯಲ್ಲಿ ಬೃಹತ್ ಆರೋಗ್ಯ ಮೇಳ ಆಯೋಜಿಸಲಾಗಿದೆ. 

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಅವರ ಘನ ಉಪಸ್ಥಿತಿಯಲ್ಲಿ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಗಮಿಸಲಿದ್ದಾರೆ. ಸವದತ್ತಿ-ಯಲ್ಲಮ್ಮ ವಿಧಾನಸಭಾ ಶಾಸಕ ವಿಶ್ವಾಸ ವೈದ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. 

ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ ಹುಕ್ಕೆರಿ, ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಕಾಗೆ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ. 

ರಾಜ್ಯ ಸಭೆ ಸಂಸದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಲೋಕಸಭೆ ಸಂಸದ ಜಗದೀಶ ಶೆಟ್ಟರ, ಉತ್ತರ ಕನ್ನಡ ಲೋಕಸಭೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಿಲ್ಲೆಯ ವಿಧಾನ ಸಭೆ, ವಿಧಾನ ಪರಿಷತ್ ಶಾಸಕರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.