ಪ್ರಯಾಗ್ ರಾಜ್, ಫೆ 28 : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಮತ್ತು ದಿವ್ಯಾಂಗರಿಗೆ ಸಾಧನ ಸಲಕರಣ ನೀಡುವ ಯೋಜನೆಯಡಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣಗಳನ್ನು ವಿತರಿಸುವ ಬೃಹತ್ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಲಿದ್ದಾರೆ.
ಇದು ದೇಶದ ಬೃಹತ್ ಕಾರ್ಯಕ್ರಮವಾಗಿದ್ದು ಇದರಡಿ ಫಲಾನುಭವಿಗಳ ಸಂಖ್ಯೆ ಮತ್ತು ವಿತರಣೆಯಾಗಲಿರುವ ಸಾಧನ ಸಲಕರಣೆಗಳ ಸಂಖ್ಯೆ ಅತಿ ಹೆಚ್ಚಿದೆ. ಈ ಬೃಹತ್ ಶಿಬಿರದಲ್ಲಿ 56 ಸಾವಿರಕ್ಕೂ ಹೆಚ್ಚು ವಿವಿಧ ಸಾಧನ ಸಲಕರಣಗಳನ್ನು 26 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಈ ಎಲ್ಲ ಸಾಧನ, ಸಲಕರಣೆಗಳ ವೆಚ್ಚ 19 ಕೋಟಿ ರೂಪಾಯಿಗೂ ಹೆಚ್ಚು ಎಂದು ಮೂಲಗಳು ತಿಳಿಸಿವೆ.
ದಿವ್ಯಾಂಗರು ಮತ್ತು ಹಿರಿಯ ನಾಗರಿಕರ ದೈನಂದಿನ ಚಟುವಟಿಕೆಗಳಿಗೆ ನೆರವಾಗುವ ಸಾಧನಗಳನ್ನು ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಮೂಲಕ ಅವರ ಸಾಮಾಜಿಕ – ಆರ್ಥಿಕ ಅಭಿವೃದ್ಧಿಗೆ ನೆರವಾಗುವ ಆಶಯ ಹೊಂದಲಾಗಿದೆ.