ಬೆಳಗಾವಿ: ಕೇಂದ್ರ ಸರ್ಕಾ ರದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಹಿಂದುಪರ ಸಂಘಟನೆಗಳು ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಹಿಂದು ರಾಷ್ಟ್ರ ಸೇನಾ ಅಧ್ಯಕ್ಷ ರವಿ ಕೊಕಿತ್ಕರ್ ಮಾತನಾಡಿ, ಕೇಂದ್ರ ಸಕರ್ಾರ ಜಾರಿಗೆ ತರುತ್ತಿರುವ ಪೌರತ್ವ ಕಾಯ್ದೆಯನ್ನು ನಮ್ಮ ಬೆಂಬಲವಿದೆ. ಈ ಕಾಯ್ದೆ ದೇಶದ ಪ್ರಗತಿಗೆ ಪೂರಕವಾಗಿದೆ. ವಿರೋಧ ಪಕ್ಷದವರು ಕಾಯ್ದೆ ಬಗ್ಗೆ ಮುಸ್ಲಿಂ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡಿಸಿ ಸಕರ್ಾರದ ವಿರುದ್ಧ ದಂಗೆ ಏಳಲು ಪ್ರೇರೇಪಿಸುತ್ತಿವೆ. ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಮುಸ್ಲಿಮರು ವಿರೋಧ ಪಕ್ಷಗಳ ಮಾತುಗಳಿಗೆ ಕಿವಿಗೊಡಬಾರದು ಎಂದರು.
ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಿಂದ ಪ್ರಾರಂಭವಾದ ಮೆರವಣಿಗೆ ರಾಣಿ ಚನ್ನಮ್ಮ ವೃತ್ತದಿಂದ ಹಾಯ್ದು ಸರದಾರ ಮೈದಾನಕ್ಕೆ ಹೋಗಿ ಸಮಾವೇಶ ನಡೆಯಿತು. ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪರ ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತ ಪಡಿಸಿದರು. ಶ್ರೀರಾಮ ಸೇನೆ ಹಿಂದುಸ್ಥಾನ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ ಮಾತನಾಡಿ, ಜಗತ್ತಿನಲ್ಲಿ ಅನೇಕ ರಾಷ್ಟ್ರಗಳು ಇಸ್ಲಾಂ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡಿವೆ. ಅಲ್ಲಿರುವ ಹಿಂದು ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಕಾಯ್ದೆ ತಿದ್ದುಪಡಿಯಿಂದ ದೇಶದ ಮುಸ್ಲಿಂರಿಗೆ ಯಾವುದೇ ತೊಂದರೆಯಿಲ್ಲ.
ಪೌರತ್ವ ಕಾಯ್ದೆ ಬಗ್ಗೆ ರಾಜಕೀಯವಾಗಿ ಜನರಲ್ಲಿ ತಪ್ಪು ಕಲ್ಪನೆಗಳನ್ನು ಮೂಡಿಸಲಾಗುತ್ತಿದೆ. ಹಾಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.