ನೆಲ, ಜಲ, ಪರಿಸರದೊಂದಿಗೆ ಮನುಷ್ಯನ ಸಹಬಾಳ್ವೆ ಅತ್ಯಗತ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
Human coexistence with land, water and environment is essential: Justice Rajesh N. Hosamane
ಬಳ್ಳಾರಿ 27: ನೆಲ, ಜಲ, ಪರಿಸರ ಒಂದಕ್ಕೊಂದು ಅನ್ಯೋನ್ಯವಾಗಿ ಸಹಬಾಳ್ವೆಯಿಂದ ನೆಲೆಸಿವೆ. ಮನುಷ್ಯನು ಸಹ ಹೊಂದಿಕೊಂಡು ಸಹಬಾಳ್ವೆ ನಡೆಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಹಾಗೂ ವಿಶ್ರೀಕೃವಿವಿ ಸಹಭಾಗಿತ್ವದಲ್ಲಿ ವಿವಿಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಸದ್ಯದ ಪರಿಸ್ಥಿತಿಯಲ್ಲಿ ಜೀವಜಲವನ್ನು ಖರೀದಿಸಿ ಕುಡಿಯುವ ಆಪತ್ತು ಎದುರಾಗಿದೆ. ಮುಂದೊಂದು ದಿನ ಉಸಿರಾಡುವ ಗಾಳಿಯನ್ನು ಖರೀದಿಸುವ ಕಾಲ ಎದುರಾದರೂ ಆಶ್ಚರ್ಯ ಪಡಬೇಕಿಲ್ಲ. 80 ಬಿಲಿಯನ್ ವರ್ಷ ಮಾತ್ರವೇ ಭೂಮಿಯ ಆಯುಷ್ಯ ಉಳಿದಿದ್ದು, ಇದನ್ನು ಅರಿತುಕೊಂಡು ಮಾನವನು ಪರಿಸರ ಸಂರಕ್ಷಣೆಗೆ ಕೈಲಾದ ಕಾರ್ಯ ಮಾಡಬೇಕು ಎಂದರು.
ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸುವ ಅಭಿಯಾನ ಬಿಟ್ಟು ಪರಿಸರ ಸುಧಾರಿಸುವ ಕ್ರಮಗಳನ್ನು ಈಗಲೇ ಅಳವಡಿಸಿಕೊಳ್ಳುವುದು ಸೂಕ್ತ. ಭೂಮಿಯಲ್ಲಿರುವ ಕ್ರಿಮಿ-ಕೀಟಗಳು ನಾಶವಾದರೆ ಇಡೀ ಭೂಮಂಡಲವೇ ನಾಶವಾಗುತ್ತದೆ. ಆದರೆ ಮನುಷ್ಯ ನಾಶವಾದರೆ ಭೂಮಿ ಸಂಪದ್ಭರಿತಗುತ್ತದೆ ಎಂದು ಪ್ರತಿಪಾದಿಸಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ್ ಅವರು ಮಾತನಾಡಿ, ಮಾನವನ ಸರಳ ಜೀವನವೇ ಪರಿಸರದ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿದ್ದು, ಮಕ್ಕಳಿಗೆ ಬಾಲ್ಯದಿಂದಲೇ ಪರಿಸರ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಸದಿಂದ ರಸ ಉತ್ಪಾದಿಸುವ ಕಲೆ ನಾವೆಲ್ಲ ಕಲಿಯಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ತಗ್ಗಿಸಬೇಕು. ನೀರನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರವೇ ಬಳಸಬೇಕು. ಪಂಚಭೂತಗಳ ರಕ್ಷಣೆ ಮನುಕುಲದ ಮುಂದಿನ ಪೀಳಿಗೆಗೆ ನಾವು ನೀಡುವ ಕೊಡುಗೆ. ಪ್ರತಿ ಮನುಷ್ಯನು ಪರಿಸರ ಯೋಧರಾಗಿ ಕೆಲಸ ಮಾಡುವ ಅನಿವಾರ್ಯತೆ ಇಂದು ಎದುರಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಭಾಗೀಯ ಕಚೇರಿಯ ಪರಿಸರ ಅಧಿಕಾರಿ ಸಿದ್ದೇಶ್ವರ ಬಾಬು ಅವರು ಮಾತನಾಡಿ, ಉತ್ತಮ ಆರೋಗ್ಯಕ್ಕೆ ಉತ್ತಮ ಪರಿಸರ ಅಗತ್ಯವಿದೆ. ಮಾನವನ ಆಧುನಿಕ ಜೀವನಶೈಲಿಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಎಲ್ಲರೂ ‘ರೆಡ್ಯೂಸ್, ರಿಯೂಸ್, ರಿಸೈಕಲ್’ ಎಂಬ ಸಿದ್ದಾಂತ ಪಾಲಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಹಸಿ ಕಸ ಮತ್ತು ಒಣ ಕಸಗಳ ಸಮರ್ಕ ವಿಂಗಡನೆಯಿಂದ ಶೇ.50 ರಷ್ಟು ಪರಿಸರ ಹಾನಿಯನ್ನು ತಡೆಯಬಹುದು. ಸಾವಯವ ಗೊಬ್ಬರ ನಿರ್ಮಾಣ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ನಮ್ಮೆಲ್ಲರ ಆದ್ಯತೆಯಾಗಬೇಕು. ನೀರಿನ ಸಂರಕ್ಷಣೆಗೆ ಸುಮಾರು 60ಲಕ್ಷ ವೆಚ್ಚದಲ್ಲಿ ವಿವಿ ಆವರಣದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮತ್ತು ವಿವಿಧ ಹಣ್ಣು, ಹೂವುಗಳ ಸಸಿಗಳನ್ನು ನೆಟ್ಟು ಪೋಷಿಸುವ ಯೋಜನೆಗೆ ಚಾಲನೆ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮೊದಲು ದಿನಾಚರಣೆಯದ ಸ್ಮರಣಾರ್ಥ ವಿವಿಯ ಆವರಣದಲ್ಲಿ ಗಣ್ಯರು ಸಸಿಗಳನ್ನು ನೆಟ್ಟರು.
ವಿವಿಯ ಕುಲಸಚಿ ಪ್ರೊ.ವಿ ಲೋಕೇಶ್, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ಎಂ ಸಾಲಿ, ವಿತ್ತಾಧಿಕಾರಿ ಸ್ಫೂರ್ತಿ ಕೆ.ಜಿ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಡಾ.ನಾಗಭೂಷಣ್ ಚರಂತಿಮಠ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಚನ್ನಬಸವ ಹಾಗೂ ಶಾರದಾ ನಿರೂಪಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸೋಮಶೇಖರ ವಂದಿಸಿದರು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 