ಸಮುದ್ರ ಸೇರಿದ ನೂರಾರು ಆಲಿವ್ ರಿಡ್ಲೆ ಕಡಲಾಮೆ ಮರಿಗಳು
Hundreds of Olive Ridley sea turtle hatchlings have been released into the sea
ಕಾರವಾರ 18 : ಇಲ್ಲಿನ ದೇವಭಾಗ ಬುಧವಾರ ಸಂರಕ್ಷಿಸಿದ ಆಲೀವ್ ರಿಡ್ಲೆ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಯಶಸ್ವಿಯಾಗಿ ಬಿಡಲಾಯಿತು. ಕೋಸ್ಟಲ್ , ಮರೈನ್ ಇಕೋ ಸಿಸ್ಟಮ್ ಸೆಲ್ ನಿಂದಿ ಕಳೆದ ಒಂದು ತಿಂಗಳ ಹಿಂದೆ ಕಡಲಾಮೆ ಮೊಟ್ಟೆಗಳನ್ನು ಸಂರಕ್ಷಿಸಿ ಇಡಲಾಗಿತ್ತು. ಇಂದು ಬುಧವಾರ ಮೊಟ್ಟೆಯಿದ ಹೊರಬಂದ ಮರಿಗಳನ್ನು ಕಡಲಿಗೆ ಬಿಡಲಾಯಿತು. ದೇವಭಾಗ ಕಡಲತೀರದ ಮರಳಿನ ಗೂಡಿನಿಂದ 76 ಹಾಗೂ ಅಂಕೋಲಾ ಭಾಗದಿಂದ 87 ಕಡಲಾಮೆ ಮರಿಗಳು ಸೇರಿ ಒಟ್ಟು 163 ಕಡಲಾಮೆ ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡಲಾಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ರವಿಶಂಕರ್ ಸಿ. ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಡಿ. ನಾಯ್ಕ್, ಮೊಹಿಲಾ ವೆಂಕಟ್, ವಲಯ ಅರಣ್ಯಾಧಿಕಾರಿಗಳಾದ ಗಜಾನನ ನಾಯ್ಕ ಹಾಗೂ ಕಿರಣ್ ಮನವಚಾರಿ ಸೇರಿದಂತೆ ಹಲವು ಅಧಿಕಾರಿಗಳು, ಹಾಗೂ ಸ್ಥಳೀಯ ಮೀನುಗಾರರು ಇದ್ದರು. ಈ ಸಂದರ್ಭದಲ್ಲಿ ಕೋಸ್ಟಲ್ ಮರೈನ್ ಇಕೋ ಸಿಸ್ಟಮ್ ಸೆಲ್ನ ಉಪ ವಲಯ ಅರಣ್ಯಾಧಿಕಾರಿಗಳು, ಗಸ್ತು ಅರಣ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 