ಜಪಾನ್ ನಲ್ಲಿ ಹಗಿಬಿಸ್ ಚಂಡಮಾರುತ : ಹಲವು ನಗರಗಳು ಜಲಾವೃತ
ಟೋಕಿಯೋ, ಅ 14: ಉತ್ತರ ಕರ್ನಾಟಕದ ಜನರು ಅನುಭವಿಸಿದ ಪ್ರವಾಹ ಪರಿಸ್ಥಿತಿಯನ್ನೇ ಈಗ ದೂರದ ಜಪಾನಿನ ಜನರು ಅನುಭವಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಎಂದರೆ ಹಗಿಬಿಸ್ ಚಂಡಮಾರುತದಿಂದ ಜಪಾನಿನ ಪ್ರಮುಖ 14 ನದಿಗಳು ಉಕ್ಕಿ ಹರಿದು ರಾಜಧಾನಿ ಟೋಕಿಯೋ ಸೇರಿದಂತೆ ಅನೇಕ ನಗರಗಳು ಜಲಾವೃತಗೊಂಡಿವೆ. ಜನರು ಮನೆಯಿಂದ ಹೊರಗೆ ಬಾರದಂತಹ ವಿಚಿತ್ರ ಪರಿಸ್ಥಿತಿ ತಲೆದೋರಿದೆ. ಸಂಕಷ್ಟಕ್ಕೆ ಸಿಕ್ಕಿರುವ ಜನರನ್ನು ಪಾರು ಮಾಡಲು ಹೆಲಿಕಾಫ್ಟರ್ ಗಳು, ದೋಣಿಗಳು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಲ್ಲಿ ಮಳೆ ಮತ್ತು ಪ್ರವಾಹ ರಾಜ್ಯದ ಜನರನ್ನು ಸಂಕಷ್ಟಕ್ಕೆ ನೂಕಿದ್ದರೆ ದೂರದ ಜಪಾನ್ ನಲ್ಲಿ ಚಂಡಮಾರುತ ಲಕ್ಷಾಂತರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. ಸುಮಾರು 70 ಲಕ್ಷ ಜನ ಸೂರು ಕಳೆದುಕೊಂಡಿದ್ದಾರೆ. ಇದುವರೆಗಿನ ಅಂಕಿಅಂಶಗಳ ಪ್ರಕಾರ 35 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 