ಹೆಗಿಬಿಸ್ ಚಂಡಮಾರುತ : ನಲವತ್ತು ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರಕ್ಕೆ ಸೂಚನೆ
ಟೋಕಿಯೋ, ಅ 12: ಹೆಗಬಿಸ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಪಾನಿನ ಟೋಕಿಯೋ ಮೆಟ್ರೋಪೊಲಿಸ್ ಸೇರಿದಂತೆ ಹಲವೆಡೆ ವಾಸವಿರುವ 42 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಸ್ಥಳ ತೊರೆಯುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ಅವರ ಜೀವಕ್ಕೆ ಮತ್ತು ಆರೋಗ್ಯಕ್ಕೆ ಅಪಾಯದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಚೀಬಾ ಪರ್ಫೆಕ್ಚರ್ ನ ಇಚಿಹರಾ ದಲ್ಲಿ ಸುಂಟರಗಾಳಿಗೆ ಓರ್ವ ಬಲಿಯಾಗಿದ್ದು ಮೂವರು ಮಕ್ಕಳು ಸೇರಿದಂತೆ ಐವರಿಗೆ ಗಾಯಗಳಾಗಿವೆ. ಅಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಜನರು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದಾರೆ. ಟೋಕಿಯೋದಲ್ಲಿ ಪ್ರತೀಕೂಲ ಹವಾಮಾನ ಹಿನ್ನೆಲೆಯಲ್ಲಿ ಅಲ್ಲಿನ ಅಂಗಡಿ ಮುಂಗಟ್ಟುಗಳು ಶನಿವಾರ ಮುಚ್ಚಿವೆ ಎಂದು ವರದಿಯಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 