ಪತ್ನಿಯನ್ನು ಕೊಲೆಗೈದ ಪತಿ; ಅನುಮಾನವೇ ಕಾರಣ
Husband kills wife; suspicion is the reason
ಸಂಬರಗಿ 28: ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ಪತ್ನಿಯನ್ನು ಮಾರಕಾಸ್ತ್ರದಿಂದ ಹತ್ಯೆಗೈದ ಘಟನೆ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತೆಯನ್ನು ಶೋಭಾ ಪರಗೊಂಡ ಸಾರವಾಡ ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಪರಗೊಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ನಿ ಮನೆಯಲ್ಲಿ ಇದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಶೋಭಾ ಹಾಗೂ ಆರೋಪಿ ಪರಗೊಂಡ ಮೂಲತಃ ಅಥಣಿ ತಾಲೂಕಿನ ಖವಟಕೊಪ್ಪ ಗ್ರಾಮದ ನಿವಾಸಿಗಳಾಗಿದ್ದು, ಕಳೆದ ಕೆಲ ವರ್ಷಗಳಿಂದ ಉದ್ಯೋಗ ನಿಮಿತ್ತ ಅವಜೀಕರ ಮಠದಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದರು. ಶೋಭಾ ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರೆ, ಪರಗೊಂಡ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದನು.
ದಂಪತಿ ನಡುವೆ ಕೆಲ ದಿನಗಳಿಂದ ಕುಟುಂಬ ಕಲಹ ಹಾಗೂ ಪತ್ನಿಯ ಬಗ್ಗೆ ಅನುಮಾನದಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ಅನುಮಾನವೇ ಕೊಲೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಆತಂಕ ವ್ಯಕ್ತಪಡಿಸಿದರು. ಘಟನೆಯಿಂದ ಕಟಗೇರಿ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಅಥಣಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 