ಹೂವಿನಹಡಗಲಿ ಜಿಲ್ಲಾ ಕೇಂದ್ರವಾಗಲಿ: ಜನಾರ್ದನ ರೆಡ್ಡಿ ಆಗ್ರಹ
Huvinahadagali should become a district headquarters: Janardhana Reddy demands
ಹೂವಿನಹಡಗಲಿ 02: ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಹೂವಿನಹಡಗಲಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ ಹೊಸ ಜಿಲ್ಲೆ ರಚಿಸಬೇಕು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆಗ್ರಹಿಸಿದರು.
ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೂವಿನಹಡಗಲಿಯನ್ನು ಕೇಂದ್ರವಾಗಿಟ್ಟುಕೊಂಡು ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ಹೊಸ ಜಿಲ್ಲೆ ರಚಿಸಿದರೆ ಆಡಳಿತ ಹಾಗೂ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾಡಳಿತ ಭವನಕ್ಕೆ ದಿ. ಎಂ.ಪಿ. ಪ್ರಕಾಶ್ ಅವರ ಹೆಸರನ್ನು ನಾಮಕರಣ ಮಾಡಬೇಕು ಹಾಗೂ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ರೆಡ್ಡಿ, "ರೆಡ್ಡಿ ಬಗ್ಗೆ ಮಾತನಾಡದೆ ಅವರಿಗೆ ನಿದ್ರೆ ಬರುವುದಿಲ್ಲ" ಎಂದು ಟೀಕಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 