ವಾಷಿಂಗ್ಟನ್, ಏ 12,ಭಾರತ ಪೂರೈಸಿರುವ ಕೊರೊನಾ ವೈರಾಣು ಸೋಂಕಿನ ಚಿಕಿತ್ಸೆಗೆ ಪೂರಕ ಎಂದು ಪರಿಗಣಿಸಲ್ಪಟ್ಟಿರುವ ಹೈಡ್ರಾಕ್ಸಿ ಕ್ಲೋರೋಕ್ವಿನ್ ಔಷಧ ಭಾನುವಾರ ಅಮೆರಿಕ ತಲುಪಿದೆ.ನೆವಾರ್ಕ್ ವಿಮಾನ ನಿಲ್ದಾಣಕ್ಕೆ ಭಾರತ ನೀಡಿರುವ ಹೈಡ್ರಾಕ್ಸಿ ಕ್ಲೋರೋಕ್ವಿನ್ ಬಂದಿದೆ ಎಂದು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಟ್ವೀಟ್ ಮಾಡಿದ್ದಾರೆ.ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಹೈಡ್ರಾಕ್ಸಿ ಕ್ಲೋರೋಕ್ವಿನ್ ನೀಡುವಂತೆ ಪದೇ ಪದೇ ಬೇಡಿಕೆ ಇಟ್ಟಿದ್ದು ಭಾರತ ಅಪಾರ ಪ್ರಮಾಣದ ಈ ಔಷಧವನ್ನು ನೀಡಿದೆ. ಹೈಡ್ರಾಕ್ಸಿ ಕ್ಲೋರೋಕ್ವಿನ್ ಅನ್ನು ಮಲೇರಿಯಾ ಚಿಕಿತ್ಸೆಗೆ ಬಳಸಲಾಗುತ್ತಿದ್ದು ಇದೀಗ ಕೊರೊನಾ ಸೋಂಕಿನ ಚಿಕಿತ್ಸೆಗೂ ಬಳಸಬಹುದು ಎಂದು ಹೇಳಲಾಗಿದೆ. ಆದರೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ಕೊರೊನಾ ವೈರಾಣು ಸೋಂಕಿಗೆ ಔಷಧ ಎಂಬುದು ಇನ್ನೂ ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹೈಡ್ರಾಕ್ಸಿ ಕ್ಲೋರೋಕ್ವಿನ್ ನೀಡಲು ಸಮ್ಮತಿಸಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಟ್ರಂಪ್ ಗುರುವಾರ ಧನ್ಯವಾದ ತಿಳಿಸಿದ್ದರು. ಕೊರೊನಾ ಸೋಂಕು ಹರಡುತ್ತಿದ್ದಂತೆಯೇ ಭಾರತ ಹೈಡ್ರಾಕ್ಸಿ ಕ್ಲೋರೋಕ್ವಿನ್ ರಫ್ತಿಗೆ ನಿಷೇಧ ಹೇರಿತ್ತು.