ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ: ರಾಜು ಕಾಗೆ
I am also an aspirant for the ministerial post: Raju Kage
ಲೋಕದರ್ಶನ ವರದಿ
ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗೆ ಚಾಲನೆ..!
ಕಾಗವಾಡ 25: ಮತಕ್ಷೇತ್ರದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ, ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಅವರು ಸೋಮವಾರ ದಿ. 23 ರಂದು ತಾಲೂಕಿನ ಜುಗೂಳ, ಉಗಾರ ಬುದ್ರಕ್, ಶಿರಗುಪ್ಪಿ, ಮತ್ತು ಲೋಕುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ
ಪೂಜೆ ನೆರವೇರಿಸಿ, ಮಾತನಾಡುತ್ತಿದ್ದರು. ಜನಪರ ಕಾಮಗಾರಿಗಳು ಅನುಷ್ಠಾನಗೊಳ್ಳುವ ಸಂದರ್ಭದಲ್ಲಿ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಕುರಿತು ಜಾಗೃತರಾಗಿರಬೇಕು ಎಂದು ಗ್ರಾಮಸ್ಥರಿಗೆ ತಿಳಿಸಿದ ಅವರು, ಕಾಮಗಾರಿಯನ್ನು ನಿಗಧಿತ ಸಮಯದಲ್ಲಿ ಪ್ರಾರಂಭಿಸಿ ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಇನ್ನೂ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ನಾನೂ ಕೂಡ ಐದು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿದ್ದೇನೆ. ಉತ್ತರ ಕರ್ನಾಟಕದಲ್ಲಿ ಹಿರಿಯ ಶಾಸಕನಾಗಿದ್ದೇನೆ. ಆದ್ದರಿಂದ ನಾನೂ ಕೂಡ ಸಚಿವಾಕಾಂಕ್ಷಿಯಾಗಿದ್ದು, ಸಂಪುಟ ವಿಸ್ತರಣೆ ಸಮಯದಲ್ಲಿ ನನಗೂ ಸಚಿವ ಸ್ಥಾನ ಕೊಡಬೇಕು ಎಂದು ಮುಖ್ಯಮಂತ್ರಿಗಳನ್ನು ಈಗಾಗಲೇ ಆಗ್ರಹಿಸಿರುವೆ ಎಂದರು.
ಇದೇ ವೇಳೆ ಶಾಸಕ ರಾಜು ಕಾಗೆ ಅವರು ಜುಗೂಳ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಉಗಾರ ಬುದ್ರಕ್ ಗ್ರಾಮದಲ್ಲಿ ಉಗಾರ-ಶಿರಗುಪ್ಪಿ ಗ್ರಾಮಕ್ಕೆ ಹೊಂದಿಕೊಂಡ 2 ಕೋಟಿ ವೆಚ್ಚದ ಮಾಂಜರಿ ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿ, ಶಿರಗುಪ್ಪಿ ಗ್ರಾಮದಲ್ಲಿ ಮಡಿವಾಳ ಮಾಚಿದೇವ, ಮರಗುಬಾಯಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಹಾಗೂ ಚರಂಡಿ ಕಾಮಗಾರಿ ಮತ್ತು ಲೋಕುರ ಗ್ರಾಮದಲ್ಲಿ ಪೇವಿಂಗ ಬ್ಲಾಕ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಜಿ.ಪಂ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವೀರಣ್ಣ ವಾಲಿ, ಜೂಗೂಳ ಗ್ರಾ.ಪಂ. ಅಧ್ಯಕ್ಷ ಕಾಕಾ ಪಾಟೀಲ, ಮುಖಂಡರಾದ ಅಣ್ಣಾಸಾಬ ಪಾಟೀಲ, ಅನೀಲ ಕಡೋಲೆ, ರಾಜು ಕಡೋಲೆ, ಸುರೇಶ ಪಾಟೀಲ, ಬಿ.ಆಯ್. ಪಾಟೀಲ, ರವೀಂದ್ರ ವ್ಹಾಂಟೆ, ಸಂತೋಷ ಪಾಟೀಲ, ಸಾಗರ ಚೌಗಲೆ, ಸೋಮರಾಜ ಪಾಟೀಲ, ವಿವೇಕ ಪಾಟೀಲ, ಸಿದಗೊಂಡ ಪಾಟೀಲ, ಅಡಿವೆಪ್ಪ ಉಳ್ಳಾಗಡ್ಡಿ, ಸಂತೋಷ ಶೇಗುಣಸಿ, ಸದಾಶಿವ ಪೂಜಾರಿ, ಶಂಕರ ಚವ್ಹಾನ, ಮುತ್ತಪ್ಪಾ ಜಮಖಂಡಿ, ಚಿದು ಹಣಮಾಪುರೆ, ದೀಲೀಪ ಮಾದರ, ಪ್ರಕಾಶ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 