ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆಯಲ್ಲಿ ನಾನೂ ಆಕಾಂಕ್ಷಿ: ಶಾಸಕ ಕಾಗೆ
I am also an aspirant in cabinet expansion and reshuffle: MLA Kage
ಅಥಣಿ, 12 : ಮುಂಬರುವ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಲ್ಲಿ ಹಿರಿಯ ಶಾಸಕರ ಕೋಟಾದಡಿ ನಾನೂ ಆಕಾಂಕ್ಷಿ ಎಂದು ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ , ಶಾಸಕ ರಾಜು ಕಾಗೆ ಹೇಳಿದರು. ಅವರು ಈಗಾಗಲೇ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕಿಗೆ ಅವಿರೋಧವಾಗಿ ನಿರ್ಷೇಶಕರಾಗಿ ಮತ್ತು ಇತ್ತೀಚಿಗಷ್ಟೇ ಬ್ಯಾಂಕಿನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈಗ ಮತ್ತೊಮ್ಮೆ ಸಚಿವ ಸಂಪುಟದಲ್ಲಿಯೂ ಸೇರೆ್ಡಯಾಗುವೆ ಎಂದು ವಿಶ್ವಾಸದಿಂದ ಹೇಳುವ ಇವರ ಹೇಳಿಕೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಶಾಸಕರು ಸಿದ್ದೇವಾಡಿಯಲ್ಲಿ ಯಲ್ಲಮ್ಮ ದೇವಿ ಮತ್ತು ಮದಭಾವಿ ಗ್ರಾಮದಲ್ಲಿ ಸದಾಶಿವ ಮುತ್ಯಾ ಸಮುದಾಯ ಭವನಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಜಿಲ್ಲಾ ಉಸ್ತೂವಾರಿ ಸಚಿವ ಸತೀಶ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಬ್ಯಾಂಕಿನ ಹಿರಿಕಿರಿಯ ನಿರ್ದೇಶಕರ ಸಹಕಾರದಿಂದ ನಾನು ಬ್ಯಾಂಕಿನ ಉಪಾಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಿರುವೆ ಎಂದ ಅವರು ನನ್ನ ಅಧಿಕಾರವಧಿಯಲ್ಲಿ ಬ್ಯಾಂಕಿನ ಆರ್ಥಿಕ ಸ್ಥಿತಿ ಮತ್ತಷ್ಟು ಬಲಗೊಳಿಸುವ ಮೂಲಕ ಬಿಡಿಸಿಸಿ ಬ್ಯಾಂಕನ್ನು ರಾಜ್ಯದಲ್ಲಿಯೇ ನಂಬರ 1 ಸ್ಥಾನಕ್ಕೇರಿಸುವೆ ಎಂದು ಹೇಳಿದರು. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ಪ್ರತ್ಯೇಕ ರಾಜ್ಯದ ಹೋರಾಟದ ನೇತೃತ್ವವನ್ನೂ ಸಹ ನಾನೇ ವಹಿಸಿಕೊಳ್ಳುವೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಅಧಿಕಾರಿ ವೀರಣ್ಣಾ ವಾಲಿ, ಧುರೀಣರಾದ ವಿನಾಯಕ ಬಾಗಡಿ, ನಿಜಗುಣಿ ಮಗದುಮ, ಶಿವಾನಂದ ಇಬ್ರಾಹಿಂಪುರ, ರಾಯಪ್ಪ ಮಗದುಮ್, ಶ್ರೀಕಾಂತ ವಿವೇಕಿ, ಮಲಕು ಮಗದುಮ್, ಸದಾಶಿವ ಮಗದುಮ್, ಸಿದಗೊಂಡಾ ಮಗದುಮ್, ಸೋಮನಿಂಗ ಮಗದುಮ್, ಗಿರಿಮಲ್ಲ ಇಬ್ರಾಹಿಂಪುರ, ಮಾರೂತಿ ಮಗದುಮ್, ಮಲಕು ಚೌಧರಿ, ಚನ್ನಬಸು ಜಾಲಿಹಾಳ, ಗುತ್ತಿಗೆದಾರ ನದಾಫ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 