ಸಚಿವ ಸ್ಥಾನ ಸಿಗುವ ಸಂಪೂರ್ಣ ಭರವಸೆ ಇದೆ : ಶಾಸಕ ನಾಡಗೌಡ
I am fully confident of getting a ministerial position: MLA Nadagowda
ತಾಳಿಕೋಟಿ 11 : ಹಿರಿತನದ ಆಧಾರದಲ್ಲಿ ಮೊದಲ ಹಂತದ ಸಚಿವ ಸಂಪುಟದಲ್ಲಿಯೇ ನನಗೆ ಸಚಿವ ಸ್ಥಾನ ಸಿಗಬೇಕಾಗಿತ್ತು ಆದರೆ ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಸಂಪೂರ್ಣ ಭರವಸೆ ನನಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರ ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು. ಗುರುವಾರ ತಾಳಿಕೋಟಿ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಚ್ ಕೆ ಪಾಟೀಲರನ್ನು ಹೊರತುಪಡಿಸಿದರೆ ನಾನೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ. ಇದರ ಜೊತೆಗೆ ಪ್ರಬಲ ಲಿಂಗಾಯತ ಸಮಾಜಕ್ಕೆ ಸೇರಿದವನಾಗಿದ್ದೇನೆ. ಆರು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ ಅನುಭವ ನನಗಿದೆ.
ಸಿದ್ದರಾಮಯ್ಯ ಅವರಿಂದ ಹಿಡಿದು ವರಿಷ್ಠರ ವರೆಗೆ ಎಲ್ಲರೂ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡುತ್ತಲೇ ಬಂದಿದ್ದಾರೆ ನಾನು ಪಕ್ಷ ನಿಷ್ಠೆಯಿಂದ ಎಲ್ಲವನ್ನು ಸಹಿಸುತ್ತಲೇ ಬಂದಿದ್ದೇನೆ ಈಗ ಮತ್ತೆ ಆ ಸಹನೆಯನ್ನು ಪರೀಕ್ಷಿಸುವುದು ಬೇಡ ಎಂದು ವರಿಷ್ಠರಿಗೆ ಹೇಳಲು ಬಯಸುತ್ತೇನೆ ಎಂದರು. ನಾನು ಸಚಿವ ಸ್ಥಾನ ಕೇಳುತ್ತಿರುವುದು ನನಗಾಗಿ ಅಥವಾ ನನ್ನ ಸ್ವಾರ್ಥಕ್ಕಾಗಿ ಅಲ್ಲ ಕ್ಷೇತ್ರ ಹಾಗೂ ರಾಜ್ಯದ ಜನತೆಯ ಸೇವೆಯನ್ನು ಮಾಡಲಿಕ್ಕಾಗಿ. ನಾನೆಂದೂ ಅಧಿಕಾರವನ್ನು ಬಯಸಿದವನಲ್ಲ ಎಂದ ಅವರು ಈ ಬಾರಿ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆಯಲು ಎಲ್ಲ ರೀತಿಯ ಪ್ರಯತ್ನಗಳನ್ನು ನಾನು ಮಾಡಿದ್ದೇನೆ ಎಂದರು. ಈ ಸಮಯದಲ್ಲಿ ಪಕ್ಷದ ಮುಖಂಡರಾದ ಸಿದ್ದನಗೌಡ ಪಾಟೀಲ್ ನಾವದಗಿ, ಪ್ರಭುಗೌಡ ಮದರಕಲ್ಲ, ಶರಣುಧಣಿ ದೇಶಮುಖ, ಇಬ್ರಾಹಿಂ ಮನ್ಸೂರ್, ಸಂಗನಗೌಡ ಅಸ್ಕಿ ಮತ್ತಿತರರು ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 