ನಾನು ಯಾವುದೇ ಹುದ್ದೆದೆ ಅಂಟಿಕೊಂಡು ಕೂತಿಲ್ಲ: ಡಿ.ಕೆ. ಶಿವಕುಮಾರ್

I am not stuck with any post: D.K. Shivakumar

ಬೆಂಗಳೂರು 17: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಾವು ಯಾವುದೇ ಹುದ್ದೆದೆ ಅಂಟಿಕೊಂಡು ಕೂತಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹೊಸ ರಾಜ್ಯಾಧ್ಯಕ್ಷರ ಬೇಡಿಕೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಯಾವುದೇ ಹುದ್ದೆಗೆ ಅಂಟಿಕೊಂಡು ಕೂತಿಲ್ಲ . ನಮ್ಮ ಪಕ್ಷದಲ್ಲಿ ಅವರ ನಾಯಕತ್ವ ಮತ್ತು ಸಂಘಟನಾ ಸಾಮರ್ಥ್ಯದ ಆಧಾರದ ಮೇಲೆ ಸ್ಥಾನಗಳನ್ನು ನೀಡಲಾಗುತ್ತದೆ. ನಾನು ಇತರ ರಾಜಕೀಯ ಪಕ್ಷಗಳ ಬಗ್ಗೆ ಮಾತನಾಡುವುದಿಲ್ಲ. ಹುದ್ದೆಯ ಬಗ್ಗೆ ಮಾಧ್ಯಮಗಳಲ್ಲಿ ಚರ್ಚಿಸಬೇಕಾಗಿಲ್ಲ ಎಂದರು.

ಪಕ್ಷವು ಈ ಸಮಸ್ಯೆಗಳನ್ನು ಪರಿಹರಿಸುತ್ತದೆ ಮತ್ತು ಕರ್ನಾಟಕದವರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದರು.