ಪ್ರಕರಣವನ್ನು ಕಾನೂನು ರೀತಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ 30      ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ತೆರಳಿ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶಿವಕುಮಾರ್, ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ, ರಕ್ಷಣೆ ನೀಡಿದ್ದಕ್ಕಾಗಿ ನನ್ನ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕಾಂಗ್ರೆಸ್ಸಿನ ನಿಷ್ಠಾವಂತ ಹಾಗೂ ಸೈನಿಕನಂತೆ ಜವಾಬ್ದಾರಿಯುತ ರಾಜಕಾರಣಿಯಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗಿದೆ. ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದ್ದು,   ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಇದನ್ನು ಎದುರಿಸುತ್ತೇನೆ ಎಂದಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಯಾರೂ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಇ.ಡಿ ಸಮನ್ಸ್ ನೀಡಿದ್ದಕ್ಕೆ ತಾವೂ ಸಹ ಗಾಬರಿಗೊಂಡಿಲ್ಲ. ತಾವೇನೂ ಅತ್ಯಾಚಾರ  ಮಾಡಿಲ್ಲ. ಇನ್ನೊಬ್ಬರ ಹಣ ಲಪಟಾಯಿಸಿಲ್ಲ. ಇ.ಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂದು ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ದೆಹಲಿಗೆ ತೆರಳುವ ಸಂಬಂಧ ವಿಮಾನ ಟಿಕೆಟ್ ಕಾಯ್ದಿರಿಸಲಾಗಿದೆ. ದೆಹಲಿಯಲ್ಲಿ ವಿಚಾರಣೆ ಸಂಬಂಧ ವಕೀಲರ ಜೊತೆ ಚರ್ಚಿಸುವುದಾಗಿ ಹೇಳಿದರು. ದೆಹಲಿಗೂ ತೆರಳುವ ಮುನ್ನ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ ಅವರು, ಕುಟುಂಬದ ಕೆಲಸದ ನಿಮಿತ್ತ ಹೊರಹೋಗುತ್ತಿದ್ದು, ಯಾರೂ ತಮ್ಮನ್ನು ಹಿಂಬಾಲಿಸಬಾರದು ಎಂದು ನಿವಾಸದಿಂದ ತೆರಳಿದರು. ಡಿ.ಕೆ.ಶಿವಕುಮಾರ್ ಮನೆಯಿಂದ ಹೊರಬಿದ್ದ ಬಳಿಕ ಮಾಜಿ ಶಾಸಕ ವತರ್ೂರು ಪ್ರಕಾಶ್ ಡಿಕೆಶಿ ಮನಗೆ ಆಗಮಿಸಿ, ಅವರು ಇಲ್ಲದನ್ನು ಅರಿತು ಮತ್ತೆ ವಾಪಸ್ ತೆರಳಿದರು. ಗುರುವಾರ ರಾತ್ರಿ ಇಡಿ ಸಮನ್ಸ್ ನೋಟಿಸ್ ನೀಡಿದ ಬೆನ್ನಲ್ಲೆ ಡಿ.ಕೆ.ಶಿವಕುಮಾರ್, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಾರಿ  ನಿರ್ದೇಶನಾಲಯ ಸಲ್ಲಿಸಿದ್ದ ಸಮನ್ಸ್ಗೆ ತಡೆಯಾಜ್ಞೆ ಕೋರಿ ಮಾಜಿ ಸಚಿವ ಡಿ ಕೆ ಶಿವಕುಮಾರ್  ಹಾಗೂ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು  ಹೈಕೋರ್ಟ್ ನಿನ್ನೆ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. 2017ರ ಆಗಸ್ಟ್ 2ರಂದು ನಡೆಸಿದ ದಾಳಿಯಲ್ಲಿ ನವದೆಹಲಿಯ ಅವರ ನಿವಾಸದಲ್ಲಿ  8.60 ಕೋಟಿ ರೂ.ಗಳಷ್ಟು ದಾಖಲೆರಹಿತ ನಗದು ಪತ್ತೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ, ಡಿ.ಕೆ.ಶಿವಕುಮಾರ್  ಮತ್ತು ನಾಲ್ವರ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ, ಸುನಿಲ್ ಕುಮಾರ್ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ್ಣ್ಖ್ಲ್ಪು-1961್ಘ ಕಲಂ 277 ಮತ್ತು 278 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ, 193 ಹಾಗೂ 199ರ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.