ಕ್ರಿಕೆಟ್ ಅಭಿಮಾನಿಗಳ ಹೃದಯ ಮರಳಿ ಗೆಲ್ಲುವಲ್ಲಿ ನಾನು ಯಶಸ್ವಿಯಾಗಿದ್ದೇನೆ: ಹಾರ್ದಿಕ್ ಪಾಂಡ್ಯ

I have succeeded in winning back the hearts of cricket fans: Hardik Pandya

ದುಬೈ 23: ನಾನು ಕ್ರಿಕೆಟ್ ಅಭಿಮಾನಿಗಳ ಹೃದಯ ಮರಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ' ಎಂದು ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಘೋಷಿಸಿದ  ಮುಂಬೈ ಇಂಡಿಯನ್ಸ್‌ ಮ್ಯಾನೇಜ್‌ಮೆಂಟ್‌ನ  ನಿರ್ಧಾರವು ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಹಾರ್ದಿಕ್ ಪಾಂಡ್ಯ ಅವರನ್ನು ಗುರಿ ಮಾಡಿದ್ದ ಅಭಿಮಾನಿಗಳು ಅವರನ್ನು ಗೇಲಿ  ಕೂಡ ಮಾಡಿದ್ದರು.

ಆದರೆ ಕಳೆದ ವರ್ಷವೇ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಮಹತ್ವದ ಪಾತ್ರ ವಹಿಸಿದ್ದರು. ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಓವರ್‌‌ನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು.

ಅಭಿಮಾನಿಗಳೇ ಹೇಳಿದಂತೆ ನನ್ನ ಪಾಲಿಗೆ ಜೀವನ ಪೂರ್ಣ ವಲಯವನ್ನು ಪರಿಭ್ರಮಿಸಿದೆ. ಇಲ್ಲಿಂದ ಹಿಂದಕ್ಕೆ ತಿರುಗಿ ನೋಡುವ ಅಗತ್ಯವಿಲ್ಲ. ಅಭಿಮಾನಿಗಳ ಹೃದಯವನ್ನು ಮರಳಿ ಗೆದ್ದಿದ್ದೇನೆ' ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ.