ರಾಜ್ಯ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ: ಖರ್ಗೆ
ಬೆಂಗಳೂರು, ಜೂನ್ 12,ತಾವು ವಿಧಾನಸಭೆಗೆ ಆಯ್ಕೆಯಾದಷ್ಟು ಬಾರಿ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರೂ ಇಲ್ಲ. ಬಿಜೆಪಿಯವರು ತಮ್ಮಷ್ಟು ವರ್ಷ ರಾಜಕಾರಣ ಮಾಡಲಿ ನೋಡೋಣ ಎಂದು ರಾಜ್ಯಸಭಾ ಕಾಂಗ್ರೆಸ್ ನೂತನ ಸದಸ್ಯ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಹಿಂಭಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ. ಇದಕ್ಕೆ ಅವರ ಪಕ್ಷ ಅವಕಾಶ ನೀಡುತ್ತದೆಯೋ ಎಲ್ಲವೋ ನೋಡೋಣ. ಒಬ್ಬರ ಮೇಲೊಬ್ಬರು ರಾಜಕಾರಣ ಮಾಡುವುದು ಬೇಡ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಪ್ರತ್ಯುತ್ತರ ನೀಡಿದರು.ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವುದಾಗಿ ಮಲ್ಲಿಕಾರ್ಜುನ್ ಖರ್ಗೆ ಭರವಸೆ ನೀಡಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 